Home News ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ಮೇಲೆ FIR ದಾಖಲಿಸಿ ಬಂಧಿಸಬೇಕು: ಎಸ್. ಮುನಿಸ್ವಾಮಿ

ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ಮೇಲೆ FIR ದಾಖಲಿಸಿ ಬಂಧಿಸಬೇಕು: ಎಸ್. ಮುನಿಸ್ವಾಮಿ

0
BJP District President Sikal Ramachandra Gowda

Sidlaghatta : “ಕಾನೂನು ಅಥವಾ ಪೊಲೀಸರು ಹಾಕುವ ದಂಡಕ್ಕೆ ಹೆದರಿ ಬೈಕ್ ಚಲಾಯಿಸುವಾಗ ಹೆಲ್ಮೆಟ್ ಧರಿಸುವುದಲ್ಲ. ನಮ್ಮ ರಕ್ಷಣೆ ಮತ್ತು ನಮ್ಮ ಮೇಲೆ ಅವಲಂಬಿತವಾಗಿರುವ ಕುಟುಂಬದ ಹಿತದೃಷ್ಟಿಯಿಂದ ಹೆಲ್ಮೆಟ್ ಧರಿಸುವುದು ಪ್ರತಿಯೊಬ್ಬರ ಕರ್ತವ್ಯ,” ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು.

ನಗರದ ಮಯೂರ ವೃತ್ತದ ಬಿಜೆಪಿ ಸೇವಾ ಸೌಧದ ಆವರಣದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜಯಂತಿ ಅಂಗವಾಗಿ ರಾಮಚಂದ್ರಗೌಡ ಫೌಂಡೇಷನ್ (RCG Foundation) ವತಿಯಿಂದ ಹಮ್ಮಿಕೊಂಡಿದ್ದ ಹೆಲ್ಮೆಟ್ ವಿತರಣೆ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜೀವ ಉಳಿಸುವ ನಿಯಮಗಳು: ಕೇವಲ ಹೆಲ್ಮೆಟ್ ಧರಿಸುವುದು ಮಾತ್ರವಲ್ಲದೆ, ಸಂಚಾರಿ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ರಸ್ತೆ ಸುರಕ್ಷತೆಯು ರಾಷ್ಟ್ರೀಯ ಸಂಪತ್ತಾದ ಮಾನವ ಜೀವಗಳನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಟಲ್ ಬಿಹಾರಿ ವಾಜಪೇಯಿ ಅವರ ಸೇವೆ ಮತ್ತು ಆದರ್ಶಗಳು ಇಂದಿಗೂ ನಮಗೆ ಮಾದರಿ ಎಂದು ಅವರು ಸ್ಮರಿಸಿದರು.

ಬೈಕ್ ರ್ಯಾಲಿ ಮೂಲಕ ಜಾಗೃತಿ: ಕಾರ್ಯಕ್ರಮದ ನಂತರ ಸಾರ್ವಜನಿಕರಿಗೆ ಉಚಿತವಾಗಿ ಹೆಲ್ಮೆಟ್‌ಗಳನ್ನು ವಿತರಿಸಲಾಯಿತು. ಬಳಿಕ ಹೆಲ್ಮೆಟ್ ಧರಿಸಿ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸುವ ಮೂಲಕ ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಂ. ರಾಜಣ್ಣ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ, ಕಂಬದಹಳ್ಳಿ ಸುರೇಂದ್ರಗೌಡ ಹಾಗೂ ಚಿಂತಾಮಣಿ ಮತ್ತು ಶಿಡ್ಲಘಟ್ಟದ ಹಲವು ಮುಖಂಡರು ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version