Home News ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

0
Sidlaghatta SN Kria Trust Achievers Award

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಗ್ರಾಮದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಎಸ್.ಎನ್.ಕ್ರಿಯಾ ಟ್ರಸ್ಟ್ (SN Kria Trust) ವತಿಯಿಂದ ಹಮ್ಮಿಕೊಂಡಿದ್ದ ಸಾಧಕರಿಗೆ ಸನ್ಮಾನ (Achievers Felicitation) ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್.ಎನ್ ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ಪುಟ್ಟು ಅವರು ಮಾತನಾಡಿದರು.

ಜೀವನದಲ್ಲಿ ಗುರಿ, ಛಲ ಮತ್ತು ಗುರುವಿನ ಆಶೀರ್ವಾದ ಇದ್ದರೆ ಮಾತ್ರ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ. ಪ್ರತಿಯೊಬ್ಬರಲ್ಲೂ ಒಂದೊಂದು ಶಕ್ತಿಯಿರುತ್ತದೆ, ವಿಶೇಷ ಆಸಕ್ತಿಯಿರುತ್ತದೆ. ತಮ್ಮ ಶಕ್ತಿಯನ್ನು ಗುರುತಿಸಿಕೊಂಡು ಪ್ರತಿಯೊಬ್ಬರೂ ಸಾಧನೆಯ ಮೆಟ್ಟಿಲೇರಬೇಕು ಎಂದು ಹೇಳಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದರೊಂದಿಗೆ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವುದು ಹಾಗೂ ಎಲೆ ಮರೆಯ ಕಾಯಿಗಳಂತೆ ವಿವಿಧ ಕ್ಷೇತ್ರಗಳಲ್ಲಿ ಯಾವುದೇ ಫಲಾಪೇಕ್ಷೆಯಿಲ್ಲದೆ ತೊಡಗಿಸಿಕೊಂಡಿರುವ ಸಾಧಕರನ್ನು ಸನ್ಮಾನಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಈಗಿನ ವಿದ್ಯಾರ್ಥಿಗಳೇ ಮುಂದಿನ ಭವಿಷ್ಯದ ರೂವಾರಿಗಳು. ವಿದ್ಯಾವಂತರಾಗಿ ಸಮಾಜಕ್ಕೆ ಏನಾದರೂ ಹಿಂದಿರುಗಿಸುವ ಕೆಲಸವನ್ನೂ ಸಹ ಮಾಡಬೇಕು. ಪ್ರತಿಯೊಬ್ಬರ ಬೆಳವಣಿಗೆಯಲ್ಲೂ ಪೋಷಕರು, ಶಿಕ್ಷಕರು, ಸ್ನೇಹಿತರು ಮುಂತಾದವರ ಕಾಣಿಕೆಯಿರುತ್ತದೆ. ಬೆಳೆಯುವ ಹಾದಿಯನ್ನು ಮರೆಯಬಾರದು, ಇತರರಿಗೆ ಸಹಾಯ ಮಾಡುವ ಮನೋಭಾವವನ್ನು ಬಿಡಬಾರದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ತಾಲ್ಲೂಕಿನ ಸುಮಾರು 1200 ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಹುಲಿಕಲ್ ನಟರಾಜ್ ಪವಾಡ ಹೇಗೆ ಮಾಡುತ್ತಾರೆ ಎಂಬುದರ ಬಗ್ಗೆ ಮಕ್ಕಳಿಗೆ ತಿಳಿಸಿದರೆ, ಮುಂದಿನ ಭವಿಷ್ಯದ ದೃಷ್ಠಿಯಿಂದ ಮಕ್ಕಳು ಹೇಗೆ ಸಿದ್ಧರಾಗಬೇಕು ಎನ್ನುವುದರ ಬಗ್ಗೆ ಕನಕಪುರ ಐಐಟಿಯ ಸುರೇಂದ್ರರೆಡ್ಡಿ ಮಕ್ಕಳಿಗೆ ತಿಳಿಸಿದರು.

ಏಷ್ಯಾದ ಬಲಶಾಲಿ ವ್ಯಕ್ತಿ ಎಂದೇ ಖ್ಯಾತರಾದ ಮನೋಜ್ ಚೋಪ್ರಾ ವಿವಿಧ ವಸ್ತುಗಳನ್ನು ಬರಿಕೈಯ್ಯಲ್ಲಿ ಮುರಿಯುವ ಮೂಲಕ ಮಕ್ಕಳನ್ನು ರಂಜಿಸಿದರು. ಕೊತ್ತನೂರು ಗಂಗಾಧರ್ ವೀರಗಾಸೆ ಕಲೆಯನ್ನು ಪ್ರದರ್ಶಿಸಿದರೆ ವಿವಿಧ ಸಾಂಸ್ಕೃತಿಕ ಕಲಾತಂಡಗಳ ಕುಣಿತ ಕಾರ್ಯಕ್ರಮಕ್ಕೆ ಮತ್ತಷ್ಟು ಸೊಬಗು ನೀಡಿದವು.

ಕಾರ್ಯಕ್ರಮದಲ್ಲಿ ಎಸ್.ಎಲ್.ವಿ ಬಿಲ್ಡರ್ಸ್ ನ ರಾಜಗೋಪಾಲನಾಯ್ಡು, ಸುಧೀರ್, ಮುಖಂಡರಾದ ಚಿಕ್ಕಹನುಮಂತೇಗೌಡ, ಗೌಡನಹಳ್ಳಿ ಮಂಜುನಾಥ್, ಕೋರ‍್ಲಪರ್ತಿ ಶೇಖರ್‌ರೆಡ್ಡಿ, ಅಶ್ವತ್ಥನಾರಾಯಣರೆಡ್ಡಿ, ಆನೂರು ದೇವರಾಜ್, ವಿಶ್ವನಾಥ್ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version