Home News ಬೀದಿ ನಾಯಿಗಳ ನಿಯಂತ್ರಣಕ್ಕೆ ಶೀಘ್ರ ಕ್ರಮ

ಬೀದಿ ನಾಯಿಗಳ ನಿಯಂತ್ರಣಕ್ಕೆ ಶೀಘ್ರ ಕ್ರಮ

0
Sidlaghatta stray Dog menace municipality MLA V Muniyappa

ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹಾಗೂ ಮಾಂಸದ ಅಂಗಡಿಗಳ ತ್ಯಾಜ್ಯದಿಂದ ಆಗುವ ಅನಾಹುತಗಳ ನಿಯಂತ್ರಣಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿ ಶಾಸಕ ವಿ.ಮುನಿಯಪ್ಪಸಿ ಮಾತನಾಡಿದರು.

ನಗರದಲ್ಲಿನ ಎಲ್ಲ ರೀತಿಯ ಮಾಂಸದ ಅಂಗಡಿಗಳ ಮಾಲೀಕರು ನವೆಂಬರ್ 15 ರೊಳಗೆ ನಗರಸಭೆಯಿಂದ ಪರವಾನಗಿಯನ್ನು ಪಡೆದುಕೊಳ್ಳಬೇಕು, ಎಲ್ಲೆಂದರಲ್ಲಿ ಮಾಂಸದ ತ್ಯಾಜ್ಯವನ್ನು ಎಸೆಯುವ ಮಾಂಸದ ಅಂಗಡಿಗಳ ಮಾಲೀಕರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.

 ಪ್ರತಿದಿನವೂ ಸಂಜೆ ನಗರಸಭೆಯ ವಾಹನ ಬಂದಾಗ ಅದರಲ್ಲಿ ಮಾಂಸದ ಅಂಗಡಿಗಳ ತ್ಯಾಜ್ಯವನ್ನು ಹಾಕಬೇಕೆ ಹೊರತು ಎಲ್ಲೆಂದರಲ್ಲಿ ಎಸೆಯಬಾರದೆಂದು ಸೂಚಿಸಿದರು.

 ಇನ್ನು ನಾಯಿಗಳ ಸಂತತಿಯನ್ನು ನಿಯಂತ್ರಿಸಲು ನಗರಸಭೆಯಿಂದ ಟೆಂಡರ್ ಕರೆಯಲು ಸೂಚಿಸಿದ್ದು, ಶೀಘ್ರದಲ್ಲೆ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಸುಮಿತ್ರರಮೇಶ್, ಉಪಾಧ್ಯಕ್ಷ ಅಪ್ಸರ್‌ಪಾಷ, ನಗರಸಭೆ ಆಯುಕ್ತ ಆರ್.ಶ್ರೀಕಾಂತ್, ತಹಶೀಲ್ದಾರ್ ರಾಜೀವ್, ಇಒ ಚಂದ್ರಕಾಂತ್, ಟಿಎಚ್‌ಒ ಡಾ.ವೆಂಕಟೇಶ್‌ಮೂರ್ತಿ, ಎಸ್‌ಐ ಸತೀಶ್ ಸಭೆಯಲ್ಲಿ ಭಾಗವಹಿಸಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version