Home News ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲನೆ

ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲನೆ

0
Sidlaghatta Sugaturu School Students Learning Progress

ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಅವರು ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ ಪ್ರಶಂಸಿದರು.

ತಾಲ್ಲೂಕು ಪಂಚಾಯಿತಿ ಅನಿರ್ಬಂದಿತ ಅನುದಾನದಡಿ ಶಾಲೆಗೆ ಪ್ರೊಜೆಕ್ಟರ್, ವಾಲ್‌ಸ್ಕ್ರೀನ್ ಸರಬರಾಜಾಗಿದ್ದು, ಎರಡು ಕೊಠಡಿಗಳಿಗೆ ಚುರ್ಕಿ ಹಾಕಲಾಗಿದೆ. ಕಾಮಗಾರಿಯನ್ನು ಪರಿಶೀಲಿಸಿ, ಕಾಮಗಾರಿ ನಿರ್ವಹಣೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲಾಗಿದೆ ಎಂದರು.

ನಲಿಕಲಿ ತರಗತಿಗಳಲ್ಲಿನ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಅವರು ಗಮನಿಸಿ ವರ್ಕ್‌ಬುಕ್‌ಗಳನ್ನು ಪರಿಶೀಲಿಸಿದರು. ಕಪ್ಪುಹಲಗೆಯ ಮೇಲೆ ಬರೆಸಿ ಮಕ್ಕಳಿಂದ ಓದಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯಶಿಕ್ಷಕಿ ಉಮಾದೇವಿ, ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ, ಬಿ.ನಾಗರಾಜು, ಎ.ಬಿ.ನಾಗರಾಜ, ಲಕ್ಗಷ್ಮಯ್ಯ, ಶಿಕ್ಷಕಿ ತಾಜೂನ್, ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version