Home News ಸುಗಟೂರು ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ಸುಗಟೂರು ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

0
Sidlaghatta Sugaturu Talent Award

Sugaturu, sidlaghatta : ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರವನ್ನು ಪಡೆದಿದ್ದಾರೆ. ಕರ್ನಾಟಕ ಗಾಂಧಿಸ್ಮಾರಕ ನಿಧಿ, ರಾಷ್ಟ್ರೀಯ ಸೇವಾಯೋಜನೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗಾಂಧಿಜೀವನದ ಕುರಿತಾದ ರಾಜ್ಯಮಟ್ಟದ ಪ್ರಬಂಧ ಮತ್ತು ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಆಯ್ಕೆಯಾದ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿದ್ದಕ್ಕೆ ಪ್ರತಿಭಾ ಪುರಸ್ಕಾರ (Talent Award) ದೊರೆತಿದೆ.

ಶಾಲೆಯ 8 ನೇ ತರಗತಿಯ ಎಸ್.ಎಂ.ಮಮತಾ, ಎಸ್.ಎಸ್.ರೇಣುಕಾ, 7 ನೇ ತರಗತಿಯ ಎಸ್.ಎನ್.ವಿದ್ಯಾ ಪ್ರತಿಭಾಪುರಸ್ಕಾರ ಪಡೆದವರು. ಪ್ರತಿವರ್ಷವೂ ಬೆಂಗಳೂರಿನ ಪ್ರೊ.ರಾಮಚಂದ್ರೇಗೌಡ ಅವರ ಹೆಸರಿನಲ್ಲಿ ಪುತ್ರಿ ಬಿ.ಆರ್.ಮಮತಾ ಮತ್ತು ಪ್ರೊ.ಲೀಲಾ ವಾಸುದೇವ್ ಮತ್ತು ಕಮಲಾಕ್ಷಿ ಸಹೋದರಿಯರ ದತ್ತಿನಿಧಿ ಪ್ರತಿಭಾ ಪುರಸ್ಕಾರ ಇದಾಗಿದ್ದು ತಲಾ ಸಾವಿರ ರೂ.ಗಳ ನಗದು, ಸನ್ಮಾನ, ಪ್ರಶಸ್ತಿಪತ್ರವನ್ನು ಹೊಂದಿದೆ.

ಬೆಂಗಳೂರಿನ ಕರ್ನಾಟಕ ಗಾಂಧಿಸ್ಮಾರಕನಿಧಿ, ಕೇಂದ್ರವಾರ್ತಾ ಮತ್ತು ಪ್ರಸಾರ ಸಚಿವಾಲಯ, ರಾಷ್ಟ್ರೀಯ ಸೇವಾಯೋಜನೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಶ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮದ್ಯಪಾನ ಸಂಯಮ ಮಂಡಳಿ, ನೆಹರು ಯುವಕೇಂದ್ರಗಳ ಆಶ್ರಯದಲ್ಲಿ ಬೆಂಗಳೂರಿನ ಗಾಂಧಿಭವನದ ಮಹದೇವ ದೇಸಾಯಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾಪುರಸ್ಕಾರ ನಡೆಯಿತು.

ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್, ಕರ್ನಾಟಕ ಗಾಂಧಿಸ್ಮಾರಕ ನಿಧಿಯ ಅಧ್ಯಕ್ಷ ಡಾ.ವೂಡೇ ಪಿ.ಕೃಷ್ಣ, ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಗಾಂಧಿ ಶಾಂತಿಪ್ರತಿಷ್ಟಾನದ ಅಧ್ಯಕ್ಷ ಜೀರಿಗೆ ಲೋಕೇಶ್, ಸಾಹಿತಿ ವಸುಂಧರಾ ಭೂಪತಿ ಹಾಜರಿದ್ದರು.

ಪ್ರತಿಭಾ ಪುರಸ್ಕಾರಕ್ಕೆ ಭಾಜನರಾದ ವಿದ್ಯಾರ್ಥಿಗಳನ್ನು ಕ್ಷೇತ್ರಶಿಕ್ಷಣಾಧಿಕಾರಿ ಜಿ.ರಘುನಾಥರೆಡ್ಡಿ, ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ, ಶಿಕ್ಷಣ ಸಂಯೋಜಕ ಭಾಸ್ಕರಗೌಡ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವೆಂಕಟರೆಡ್ಡಿ, ಮಾಜಿ ಅಧ್ಯಕ್ಷ ಬೈರಾರೆಡ್ಡಿ ಅಭಿನಂದಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version