
ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಮಂಗಳವಾರ ಸ್ವಾತಂತ್ರ ಹೋರಾಟಗಾರ ಚಂದ್ರಶೇಖರ ಆಜಾದ್ ಸ್ಮರಣಾರ್ಥ, ರಾಷ್ಟ್ರೋತ್ಥಾನ ರಕ್ತ ನಿಧಿ ಹಾಗೂ ತಾಲ್ಲೂಕು ಬಿಜೆಪಿ ವತಿಯಿಂದ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುರೇಂದ್ರ ಗೌಡ ಮಾತನಾಡಿದರು.
ಅಪಘಾತಗಳಂತಹ ತುರ್ತು ಪರಿಸ್ಥಿತಿಯಲ್ಲಿ ರಕ್ತದ ಅವಶ್ಯಕತೆ ಇದ್ದು ದಾನಿಗಳಿಂದ ಸಂಗ್ರಹವಾದ ರಕ್ತ ಮತ್ತೊಬ್ಬರ ಜೀವ ರಕ್ಷಣೆ ಮಾಡಲಿದೆ ಎಂದು ಅವರು ತಿಳಿಸಿದರು.
ರಕ್ತದಾನ ಮಹಾದಾನ, ಕೊರೊನದ ಸಮಯದಲ್ಲಿ ಜನರು ಹೊರಬರದೆ, ರಕ್ತದಾನಿಗಳ ಕೊರತೆಯಿಂದಾಗಿ ರಕ್ತದ ಕೊರತೆ ಟಾಗಿದೆ. ಜೀವ ರಕ್ಷಕವಾದ ರಕ್ತವನ್ನು ದಾನ ಮಾಡಲು ಜನರು ಮುಂದೆ ಬರಬೇಕು. ರಕ್ತವನ್ನು ಉತ್ಪಾದನೆ ಮಾಡಲು ಸಾದ್ಯವಿಲ್ಲ ಇನ್ನೊಬ್ಬರಿಂದ ಪಡೆದೇ ರಕ್ತ ನೀಡಬೇಕು. ಪ್ರತಿ ಆರೋಗ್ಯವಂತ ಯುವಕರು ಪ್ರತಿ 3 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ. ಕಳೆದ 4 ವರ್ಷಗಳಿಂದ ಬಿಜೆಪಿ ಈ ರೀತಿಯ ರಕ್ತದಾನ ಶಿಬಿರಗಳನ್ನು ಏರ್ಪಡಿಸುತ್ತಿದೆ ಎಂದರು.
ಶಿಬಿರದಲ್ಲಿ ಎಂಬತ್ತು ಯೂನಿಟ್ ರಕ್ತ ಸಂಗ್ರಹಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಎ.ಉಮೇಶ್, ಕೆ ಮಂಜುನಾಥ್, ಅಂಬರೀಶ್, ತಾಲ್ಲೂಕು ಬಿಜೆಪಿ ಕಾರ್ಯದರ್ಶಿ ರಜನಿಕಾಂತ್ ಬಾಬು, ನಟರಾಜ್, ಯುವಮೋರ್ಚಾದ ಮೇಲೂರು ಮಹೇಶ್, ನರ್ಮದಾ ರೆಡ್ಡಿ, ಸುಜಾತಮ್ಮ, ಅರಿಕೆರೆ ಮುನಿರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಎ.ಉಮೇಶ್, ಕೆ ಮಂಜುನಾಥ್, ಅಂಬರೀಶ್ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi