Sidlaghatta, Chikkaballapur District : ಶಿಡ್ಲಘಟ್ಟ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನರೇಗಾ ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅತೀಕ್ ಪಾಷಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳಮಾಚನಹಳ್ಳಿ, ತಾದೂರು, ನಾಗಮಂಗಲ, ಜಂಗಮಕೋಟೆ ಹಾಗೂ ಕುಂಭಿಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳಾದ ಎನ್‌ಆರ್‌ಎಲ್‌ಎಂ ಕಟ್ಟಡ, ಡಿಜಿಟಲ್ ಲೈಬ್ರರಿ, ಸಭಾಂಗಣ, ಮಾದರಿ ಅಂಗನವಾಡಿ ಕೇಂದ್ರ, ಮಳೆನೀರು ಕೊಯ್ಲು ಯೋಜನೆಗಳು ಹಾಗೂ ಉದ್ಯಾನವನಗಳ ನಿರ್ಮಾಣ ಕಾರ್ಯಗಳನ್ನು ಅವರು ಸ್ಥಳದಲ್ಲಿ ಪರಿಶೀಲಿಸಿದರು.
ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ನೀಡಲಾಗುವ ಆಹಾರ ಗುಣಮಟ್ಟವನ್ನು ಕಾಪಾಡಬೇಕು ಎಂಬ ಸೂಚನೆಯನ್ನು ಅತೀಕ್ ಪಾಷಾ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಜಿಲ್ಲಾ ಯೋಜನಾ ಅಧಿಕಾರಿಗಳು ಹಾಗೂ ಎಂಜಿನಿಯರು ಸೇರಿದಂತೆ ಹಲವರು ಹಾಜರಿದ್ದರು.







