Tatahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ತಾತಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗುರುವಾರ ಶ್ರೀ ವಾಗ್ದೇವಿ ಶೈಕ್ಷಣಿಕ ಮತ್ತು ಗ್ರಾಮಾಭಿವೃದ್ಧಿ ಟ್ರಸ್ಟಿನ ವತಿಯಿಂದ 1 ರಿಂದ 3 ನೇ ತರಗತಿ ನಲಿಕಲಿ ಮಕ್ಕಳಿಗೆ ಪೀಠೋಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ವಾಗ್ದೇವಿ ಶೈಕ್ಷಣಿಕ ಮತ್ತು ಗ್ರಾಮಾಭಿವೃದ್ಧಿ ಟ್ರಸ್ಟಿನ ಅಧ್ಯಕ್ಷ ದಯಾನಂದ್ ಮಾತನಾಡಿ, ಗ್ರಾಮಗಳ ಅಭಿವೃದ್ಧಿಯೇ ನಮ್ಮ ದೇಶದ ಅಭಿವೃದ್ಧಿಯಾಗಿದೆ. ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ಮತ್ತು ನೆರವಿನ ಅಗತ್ಯವಿದೆ. ಗ್ರಾಮೀಣ ಭಾಗದಲ್ಲಿ ಶಾಲೆಗಳನ್ನು ಹಾಗೂ ಗ್ರಾಮೀಣ ಪರಿಸರವನ್ನು ಅಭಿವೃದ್ಧಿ ಗೊಳಿಸುವುದು ನಮ್ಮ ಟ್ರಸ್ಟಿನ ಉದ್ದೇಶ ಎಂದು ತಿಳಿಸಿದರು.
ವಾಗ್ದೇವಿ ಶೈಕ್ಷಣಿಕ ಮತ್ತು ಗ್ರಾಮಾಭಿವೃದ್ಧಿ ಟ್ರಸ್ಟಿನ ಸದಸ್ಯ ನಂದಕುಮಾರ್ ಮಾತನಾಡಿ, ತಾತಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸಿದ್ದಾರೆ. ಭವಿಷ್ಯದ ತಾತಹಳ್ಳಿ ಇಲ್ಲಿ ರೂಪುಗೊಳ್ಳುತ್ತಿದೆ ಎಂದು ಹೇಳಿದರು.
ವಾಗ್ದೇವಿ ಶೈಕ್ಷಣಿಕ ಮತ್ತು ಗ್ರಾಮಾಭಿವೃದ್ಧಿ ಟ್ರಸ್ಟಿನ ಅಧ್ಯಕ್ಷ, ವಿಜ್ಞಾನಿ ಡಾ. ಜಿ.ಎನ್. ದಯಾನಂದ್, ನಿವೃತ್ತ ಬಿ.ಬಿ.ಎಂ.ಪಿ ಎಂಜಿನಿಯರ್ ಎಚ್.ಎಂ. ನಂದಕುಮಾರ್, ಶಿಕ್ಷಕ ಮುರಳಿ, ಎಸ್.ಡಿ.ಎಂ.ಸಿ ಸಮಿತಿಯ ಅಧ್ಯಕ್ಷ ಮುರಳಿ, ಸದಸ್ಯ ಅಜಯ್, ಶಾಲೆಯ ಮುಖ್ಯ ಶಿಕ್ಷಕಿ ಎಚ್.ಎಂ.ಸರಸ್ವತಮ್ಮ, ಶಿಕ್ಷಕರಾದ ಪಿ. ಸುದರ್ಶನ, ಎಸ್. ಕಲಾದರ್, ಕೆ.ಎನ್.ನಾಗರಾಜ, ಶಾಂತಮ್ಮ ಹಾಜರಿದ್ದರು.
For Daily Updates WhatsApp ‘HI’ to 7406303366









