Home News ಶಿಕ್ಷಕರಿಂದ ಸಮಾಜದಲ್ಲಿ ಪರಿವರ್ತನೆ ಸಾಧ್ಯ – ಶಾಸಕ ವಿ.ಮುನಿಯಪ್ಪ

ಶಿಕ್ಷಕರಿಂದ ಸಮಾಜದಲ್ಲಿ ಪರಿವರ್ತನೆ ಸಾಧ್ಯ – ಶಾಸಕ ವಿ.ಮುನಿಯಪ್ಪ

0
Sidlaghatta Teachers Day

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಿಡ್ಲಘಟ್ಟ ನಗರದ ಹೊರವಲಯದ ಹನುಮಂತಪುರ ಗೇಟ್ ಬಳಿಯಿರುವ ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ಭಾನುವಾರ ಆರೋಜಿಸಲಾಗಿದ್ದ ಭಾರತರತ್ನ ಎಸ್.ರಾಧಾಕೃಷ್ಣನ್ ರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.

ಶಿಕ್ಷಣ ಕ್ಷೇತ್ರವನ್ನು ಹೊರತುಪಡಿಸಿ ಬೇರಾವುದೇ ಕ್ಷೇತ್ರದಿಂದ ಸಮಾಜದಲ್ಲಿ ಪರಿವರ್ತನೆ ಹಾಗೂ ಅಭಿವೃದ್ದಿ ಸಾಧ್ಯವಾಗುವುದಿಲ್ಲ. ಸಮಾಜದಲ್ಲಿ ಅತಿ ಹೆಚ್ಚು ಗೌರವ ಹಾಗೂ ಘನತೆಗೆ ಪಾತ್ರವಾಗಿರುವ ಶಿಕ್ಷಣ ವ್ಯವಸ್ಥೆಯನ್ನು ಹಾಗೂ ಶಿಕ್ಷಕರನ್ನು ಪ್ರತಿಯೊಬ್ಬರು ಗೌರವಿಸಬೇಕು. ಶಿಕ್ಷಕರು ಕೇವಲ ಪಾಠಪ್ರವಚನಗಳನ್ನು ಕಲಿಸುವುದಷ್ಟೆ ಅಲ್ಲದೆ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಡೆಗೆ ಹೆಚ್ಚಿನ ಚಿಂತನೆ ನಡೆಸಬೇಕು ಎಂದರು.

ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿದ್ದ ಗುರುಭವನ ನಿರ್ಮಾಣ ಮಾಡಲು ಶಾಸಕರ ನಿಧಿಯಿಂದ 25 ಲಕ್ಷ ನೀಡುವ ಭರವಸೆ ನೀಡಿದ ಅವರು ಮೊದಲನೇ ಕಂತಿನ 15 ಲಕ್ಷ ರೂಗಳನ್ನು ಮುಂದಿನ ತಿಂಗಳು ನೀಡಲಿದ್ದು, ಉಳಿದ ಹತ್ತು ಲಕ್ಷ ರೂ ಹಣವನ್ನು ಮುಂದಿನ ಮಾರ್ಚ್ ತಿಂಗಳ ನಂತರ ನೀಡಲಾಗುವುದು. ಗುರುಭವನ ನಿರ್ಮಾಣಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.

ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಭಾರತರತ್ನ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರು ಪ್ರತಿಯೊಬ್ಬ ಶಿಕ್ಷಕರಿಗೆ ಆದರ್ಶ ವ್ಯಕ್ತಿಯಾಗಿರಬೇಕು. ಬಡತನದ ನಡುವೆಯೂ ಅವರು ಮಾಡಿದ ಅಪಾರವಾದ ಸಾಧನೆಗಳೇ ಪ್ರೇರಣೆಯಾಗಬೇಕು. ಈ ಭಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 8 ವಿದ್ಯಾರ್ಥಿಗಳು 625 ಕ್ಕೆ ೬೨೫625 ಅಂಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿರುವುದು ತಾಲ್ಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ನಿವೃತ್ತರಾದ 16 ಮಂದಿ ಪ್ರಾಥಮಿಕ ಶಾಲೆ ಶಿಕ್ಷಕರು ಹಾಗೂ 7 ಮಂದಿ ಪ್ರೌಡಶಾಲೆ ಶಿಕ್ಷಕರನ್ನು ಗೌರವಿಸಲಾಯಿತು.

ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನೇಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುನಿರಾಜು, ಸರ್ಕಲ್ ಇನ್ಸ್ ಪೆಕ್ಟರ್ ಧರ್ಮೇಗೌಡ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version