Tippenahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ತಿಪ್ಪೇನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ Poshan ಮಾಸಾಚರಣೆ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪನಿರ್ದೇಶಕ ವೆಂಕಟೇಶ ರೆಡ್ಡಿ ಮಾತನಾಡಿ, ಈ ಕಾರ್ಯಕ್ರಮ ಒಂದು ದಿನಕ್ಕೆ ಸೀಮಿತವಾಗದೇ, ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳ ಮೂಲಕ ಗರ್ಭಿಣಿಯರು, ತಾಯಂದಿರಲ್ಲಿ ಪೌಷ್ಟಿಕ ಆಹಾರ ಸೇವನೆ ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ನಿತ್ಯ ಮಗುವಿಗೆ ಆಹಾರ ನೀಡುವ ವಿಧಾನ, ತಾಯಿಯ ಎದೆಹಾಲಿನ ಪ್ರಾಮುಖ್ಯ, ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಮತ್ತು ಇತರೆ ಉಪ ಆಹಾರಗಳನ್ನು ನೀಡುವ ವಿಧಾನಗಳ ಬಗ್ಗೆ ತಿಳಿಸಿಕೊಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿದ್ಯಾ.ಎ ವಸ್ತ್ರದ್, ಕೆ. ಮುತ್ತುಕದಹಳ್ಳಿ ವೃತ್ತದ ಮೇಲ್ವಿಚಾರಕಿ ಶಶಿಕಲಾ. ಆರ್, ಎ ಡಬ್ಲ್ಯೂ ರಾಮಚಂದ್ರಪ್ಪ, ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀನಿವಾಸ್, ಆರೋಗ್ಯ ಇಲಾಖೆಯ ನಂದಿನಿ, ತಿಪ್ಪೇನಹಳ್ಳಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಾರದಮ್ಮ, ಅಂಗನವಾಡಿ ಕಾರ್ಯಕರ್ತೆಯರಾದ ತುಮ್ಮನಹಳ್ಳಿ ಆರತಿ, ಸೊರಕಾಯಲಹಳ್ಳಿ ಮಂಜುಳಮ್ಮ, ದೊಡ್ಡದಾಸರಹಳ್ಳಿ ಶಾಂತಮ್ಮ, ಹಾಗೂ ಕೆ.ಮುತ್ತುಕದಹಳ್ಳಿ ವೃತ್ತದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಮಕ್ಕಳ ತಾಯಂದಿರು ಹಾಜರಿದ್ದರು.