News

ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಣೆ

Sidlaghatta City Municipality uniform distribution

ಶಿಡ್ಲಘಟ್ಟ ನಗರದ ನಗರಸಭೆ ಕಾರ್ಯಾಲಯದಲ್ಲಿ ನೇರ ಪಾವತಿ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ನಗರಸಭೆಯಿಂದ ಸಮವಸ್ತ್ರ ವಿತರಿಸಿ ನಗರಸಭೆ ಅಧ್ಯಕ್ಷೆ ಸುಮಿತ್ರ ರಮೇಶ್ ಮಾತನಾಡಿದರು.

ನಗರದ ಜನತೆಯ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪ್ರತಿನಿತ್ಯ ದುಡಿಯುವ ಪೌರ ಕಾರ್ಮಿಕರು ತಮ್ಮ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಕೆಲಸ ಮಾಡುವಾಗ ಕಡ್ಡಾಯವಾಗಿ ಸಮವಸ್ತ್ರ ಸೇರಿದಂತೆ ಕೈ ಗವಸು, ಮಾಸ್ಕ್ ಬಳಸಬೇಕು. ನಗರದಾದ್ಯಂತ ಸ್ವಚ್ಚತೆ ಹಾಗೂ ನಗರದ ಅಂದವನ್ನು ಹೆಚ್ಚಿಸುವ ಸಲುವಾಗಿ ಶ್ರಮಿಸುವ ಪೌರಕಾರ್ಮಿಕರು ಸಮವಸ್ತ್ರ ಧರಿಸಿ ಕಾರ್ಯ ನಿರ್ವಹಿಸುವ ಮೂಲಕ ನಗರಸಭೆ ಸಿಬ್ಬಂದಿಯೆನ್ನುವ ಪ್ರತ್ಯೇಕತೆ ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್ ಮಾತನಾಡಿ, ನಗರಸಭೆ ಪೌರ ಕಾರ್ಮಿಕರಿಗೆ ಸರ್ಕಾರದಿಂದ ಸಮವಸ್ತ್ರ ನೀಡಲಾಗುತ್ತಿದೆಯಾದರೂ, ನೇರ ಪಾವತಿ ಅಡಿಯಲ್ಲಿ ಕೆಲಸ ಮಾಡುವವರಿಗೆ ನಗರಸಭೆಯಿಂದ ಸಮವಸ್ತ್ರ ವಿತರಿಸಲಾಗುತ್ತಿದೆ. ಪ್ರತಿಯೊಬ್ಬರೂ ಸಮವಸ್ತ್ರ ಧರಿಸಿ ಕಾರ್ಯ ನಿರ್ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಪಿ.ಕೆ.ಕಿಷನ್, ಕೆ.ಬಿ.ಮಂಜುನಾಥ, ಎಸ್.ಎಂ.ರಮೇಶ್, ಅಕ್ರಮ್, ಆಸೀಫ್, ಪೌರ ಸೇವಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಮುರಳಿ, ಸಹಾಯಕ ಅಭಿಯಂತರ ರಘುನಾಥ್ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

Sidlaghatta Garudadri English Public School Gate Muddy Road 06082026

News

ಕನಕನಗರ: ಗರುಡಾದ್ರಿ ಶಾಲೆ ಮುಂಭಾಗದ ರಸ್ತೆ ಕೆಸರುಮಯ, ಮಕ್ಕಳಿಗೆ ಗಾಯ – ಪೋಷಕರ ಆಕ್ರೋಶ

Sidlaghatta ಶಿಡ್ಲಘಟ್ಟ : ಶಿಡ್ಲಘಟ್ಟ ನಗರದ ಕನಕನಗರದಲ್ಲಿರುವ ಗರುಡಾದ್ರಿ ಇಂಗ್ಲಿಷ್ ಪಬ್ಲಿಕ್ ಶಾಲೆಯ ಮುಂಭಾಗದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ನೂರಾರು ಮಕ್ಕಳು ಹಾಗೂ ಪೋಷಕರು…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Paurakarmikas day BJP Felicitation

News

ಸ್ವಚ್ಛತಾ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಪೌರಕಾರ್ಮಿಕರಿಗೆ ಸನ್ಮಾನ

Sidlaghatta : ವೈಯಕ್ತಿಕ ಸ್ವಚ್ಛತೆ ಹಾಗೂ ನಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಂಡಾಗ ಮಾತ್ರ ನಾವು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಸದೃಢವಾಗಿ ಕಾಪಾಡಿಕೊಳ್ಳಲು…

Share