Home News ಶಿಡ್ಲಘಟ್ಟದ ಬಸ್ ನಿಲ್ದಾಣದ ಬಳಿ ಬೀದಿ ನಾಟಕದ ಮೂಲಕ ಸ್ವಚ್ಛತೆಯ ಅರಿವು

ಶಿಡ್ಲಘಟ್ಟದ ಬಸ್ ನಿಲ್ದಾಣದ ಬಳಿ ಬೀದಿ ನಾಟಕದ ಮೂಲಕ ಸ್ವಚ್ಛತೆಯ ಅರಿವು

0
Sidlaghatta City Municipal corporation Awareness

ನಗರದ ಬಸ್ ನಿಲ್ದಾಣದ ಬಳಿ ಶುಕ್ರವಾರ ಸ್ವಚ್ಛತೆಯ ಕುರಿತು ಜನಜಾಗೃತಿ ಮೂಡಿಸಲು ಪರಿವರ್ತನಾ ಕಲಾ ಸಂಸ್ಥೆಯ ಮೂಲಕ ಆಯೋಜಿಸಿದ್ದ ಬೀದಿ ನಾಟಕಕ್ಕೆ ಚಾಲನೆ ನೀಡಿ ಪೌರಾಯುಕ್ತ ಶ್ರೀನಿವಾಸ್ ಮಾತನಾಡಿದರು.

ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡಲು ಪೌರಕಾರ್ಮಿಕರಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ನಿಮ್ಮ ಮನೆ ಅಥವಾ ಅಂಗಡಿಗಳ ತ್ಯಾಜ್ಯವನ್ನು ರಸ್ತೆಯಲ್ಲಿ ಸುರಿಯಬಾರದು ಎಂದು ಅವರು ತಿಳಿಸಿದರು.

 ನಗರ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ತರ ವಾಗಿದ್ದು, ಅವರ ಸೇವೆಯನ್ನಿಲ್ಲಿ ಸ್ಮರಿಸಲಾಗಿದೆ. ಜೊತೆಗೆ ಜನರು ಯಾವ ರೀತಿಯಲ್ಲಿ ತಮ್ಮ ಜವಾಬ್ದಾರಿ ನಿರ್ವಹಿಸಬೇಕು, ಕಸದ ವಾಹನ ಬಂದಾಗ ಮನೆಯ ಕಸವನ್ನು ಯಾವ ರೀತಿಯಲ್ಲಿ ವಿಂಗಡಿಸಿ ನೀಡಬೇಕು, ಎಂಬುದರ ಜೊತೆಗೆ ಪ್ಲಾಸ್ಟಿಕ್‌ ಬಳಕೆ ತ್ಯಜಿಸುವುದು, ನೈರ್ಮಲ ಜಾಗೃತಿ ಮೂಡಿಸುವುದರ ಕುರಿತು ನಾಟಕದ ಮೂಲಕ ಹೇಳಲಾಗುತ್ತಿದೆ ಎಂದರು.

 ನಾಗರಿಕರು ಮನೆಯಲ್ಲಿ ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಬೇಕು. ರಸ್ತೆಯಲ್ಲಿ ಕಸಕಡ್ಡಿ ಅಥವಾ ತ್ಯಾಜ್ಯವನ್ನು ಸುರಿದರೆ ಅದನ್ನು ಮನೆಯ ಮುಂದೆ ಅಥವಾ ಅಂಗಡಿಯ ಮುಂದೆ ಡಂಪ್ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

 ಈ ಸಂದರ್ಭದಲ್ಲಿ ನಗರಸಭೆ ಆರೋಗ್ಯ ನಿರೀಕ್ಷಕಿ ಶೋಭಾ, ನೀರು ಸರಬರಾಜು ವಿಭಾಗದ ಮುರಳಿ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version