Tummanahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿ ಸುಶೀಲಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಯರಿಗೆ ಮೀಸಲಾಗಿರುವ ಈ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸುಶೀಲಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವುದೇ ಅಭ್ಯರ್ಥಿಗಳು ಸ್ಪರ್ಧಿಸದ ಕಾರಣ, ಅವಿರೋಧವಾಗಿ ಅವರ ಆಯ್ಕೆ ಘೋಷಣೆಯಾಯಿತು ಎಂದು ಚುನಾವಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್ ತಿಳಿಸಿದ್ದಾರೆ.
- Advertisement -
- Advertisement -