Home News ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ; ಆಟೋ ಚಾಲಕರು ಸಮವಸ್ತ್ರ ಧರಿಸಿ

ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ; ಆಟೋ ಚಾಲಕರು ಸಮವಸ್ತ್ರ ಧರಿಸಿ

0
Sidlaghatta Two Wheelers Helmet Compulsory

Sidlaghatta : ದ್ವಿಚಕ್ರ ವಾಹನ ಸವಾರರು ಕೇವಲ ಕಾನೂನಿನ ಭಯಕ್ಕೆ ಹೆಲ್ಮೆಟ್ ಧರಿಸುವುದರ ಬದಲು, ತಮ್ಮ ಮತ್ತು ತಮ್ಮ ಮೇಲೆ ಆಧಾರವಾಗಿರುವ ಕುಟುಂಬದವರ ಹಿತದೃಷ್ಟಿಯಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು ಎಂದು ನಗರ ಠಾಣೆ ಎಸ್‌.ಐ. ವೇಣುಗೋಪಾಲ್ ಅವರು ವಾಹನ ಸವಾರರಲ್ಲಿ ಮನವಿ ಮಾಡಿದರು.

ಹೆಲ್ಮೆಟ್ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ, ನಗರದ ರೇಷ್ಮೆ ಗೂಡಿನ ಮಾರುಕಟ್ಟೆ, ಕೆ.ಎಸ್‌.ಆರ್‌.ಟಿ.ಸಿ. ಬಸ್ ನಿಲ್ದಾಣ ಮತ್ತು ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ವಾಹನ ಸವಾರರಿಗೆ ಜಾಗೃತಿ ಮೂಡಿಸಿ ಅವರು ಮಾತನಾಡಿದರು.

ದಾಖಲೆಗಳ ನಿರ್ವಹಣೆ ಕಡ್ಡಾಯ:

ಜಿಲ್ಲೆಯಲ್ಲಿ ಈಗಾಗಲೇ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಸವಾರರು ಹೆಲ್ಮೆಟ್ ಧರಿಸುವುದರ ಜತೆಗೆ, ವಾಹನಕ್ಕೆ ಸಂಬಂಧಿಸಿದ ಚಾಲನಾ ಪರವಾನಗಿ (DL), ವಿಮೆ ಮತ್ತು ಇನ್ನಿತರ ಸೂಕ್ತ ದಾಖಲೆಗಳನ್ನು ಕ್ರಮಬದ್ಧವಾಗಿ ಇಟ್ಟುಕೊಳ್ಳಬೇಕು. ದಾಖಲೆ ಇಲ್ಲವಾದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು.

ಹೆಲ್ಮೆಟ್ ಧರಿಸುವುದರಿಂದ ಆಗುವ ಉಪಯೋಗಗಳು ಮತ್ತು ಧರಿಸದೆ ಇದ್ದರೆ ಅಪಘಾತ ಸಂದರ್ಭದಲ್ಲಿ ಆಗುವ ಅಪಾಯಗಳ ಬಗ್ಗೆ ಸವಾರರಿಗೆ ಮನವರಿಕೆ ಮಾಡಿಕೊಡಲಾಯಿತು.

ಆಟೋ ಚಾಲಕರು ಸಮವಸ್ತ್ರ ಧರಿಸಿ:

ಇದೇ ವೇಳೆ, ಆಟೋ ಚಾಲಕರಿಗೂ ನಿಯಮಗಳನ್ನು ಪಾಲಿಸುವಂತೆ ತಾಕೀತು ಮಾಡಲಾಯಿತು. ಆಟೋ ಚಾಲಕರು ಕಡ್ಡಾಯವಾಗಿ ಸಮವಸ್ತ್ರ (Uniform) ಧರಿಸಬೇಕು ಮತ್ತು ಆಟೋಗಳ ದಾಖಲೆಗಳನ್ನು ಸಮರ್ಪಕವಾಗಿ ಇಟ್ಟುಕೊಳ್ಳಬೇಕು. ಎಲ್ಲಕ್ಕಿಂತ ಮುಖ್ಯವಾಗಿ, ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಎಸ್‌.ಐ. ವೇಣುಗೋಪಾಲ್ ಸೂಚಿಸಿದರು.

ಈ ಜಾಗೃತಿ ಅಭಿಯಾನದಲ್ಲಿ ನಗರ ಠಾಣೆಯ ಸಿಬ್ಬಂದಿ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version