Sidlaghatta : ವೈಕುಂಠ ದ್ವಾದಶಿಯ ಪ್ರಯುಕ್ತ ಬುಧವಾರ ನಗರದ ವಾಸವಿ ರಸ್ತೆಯಲ್ಲಿರುವ ಪುರಾಣ ಪ್ರಸಿದ್ಧ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠದ ಬಾಗಿಲು ತೆಗೆಯಲಾಗಿತ್ತು. ವಿಶೇಷ ಪೂಜೆಯನ್ನು ವಾಸವಿ ಮಂಡಳಿ ಮತ್ತು ವಾಸವಿ ಯುವಜನ ಸಂಘದಿಂದ ಆಯೋಜಿಸಲಾಗಿತ್ತು.
ವಾಸವಿ ರಸ್ತೆಯಲ್ಲಿ ಸಾಲುಗಟ್ಟಿದ್ದ ಜನರು ದೇವರ ದರ್ಶನ ಪಡೆದು ಪ್ರಸಾದವನ್ನು ಸ್ವೀಕರಿಸಿದರು. ದೇವರಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿದ್ದು, ವೆಂಕಟರಮಣಸ್ವಾಮಿಯ ಉತ್ಸವ ಮೂರ್ತಿಯನ್ನು ಉಯ್ಯಾಲೆಯಲ್ಲಿರಿಸಿದ್ದು, ಭಕ್ತರು ದೇವರ ಅಡಿಯಲ್ಲಿ ಹಾದು ಬರಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ತಂಡೋಪತಂಡವಾಗಿ ಆಗಮಿಸಿದ ಭಕ್ತಾಧಿಗಳು ಮಧ್ಯಾಹ್ನದವರೆಗೂ ವೈಕುಂಠದ ಬಾಗಿಲ ಮೂಲಕ ದೇವರ ದರ್ಶನ ಪಡೆದರು.
ವಾಸವಿ ಮಂಡಳಿ, ವಾಸವಿ ಯುವಜನ ಸಂಘ ಹಾಗೂ ವಾಸವಿ ಮಹಿಳಾ ಸಂಘದ ಪದಾಧಿಕಾರಿಗಳು ಹಾಜರಿದ್ದರು.








