Home News ಶಿಡ್ಲಘಟ್ಟದ ಶ್ರೀ ವೇಣುಗೋಪಾಲಸ್ವಾಮಿಯ ರಥೋತ್ಸವ

ಶಿಡ್ಲಘಟ್ಟದ ಶ್ರೀ ವೇಣುಗೋಪಾಲಸ್ವಾಮಿಯ ರಥೋತ್ಸವ

0
Sidlaghatta Venugopalaswamy temple chariot

ಶಿಡ್ಲಘಟ್ಟ ನಗರದ ಪುರಾತನ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರವೇ ನಗರದಲ್ಲಿ ಶುಭಕಾರ್ಯಗಳು ಪ್ರಾರಂಭವಾಗುವ ಸಂಪ್ರದಾಯವಿದೆ.

“ಊರದೇವರು” ಎಂದೇ ಪ್ರಸಿದ್ಧ­ವಾದ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ ಸಹಿತ ಎಲ್ಲ ಕೈಂಕರ್ಯಗಳು ಪಾಂಚರಾತ್ರಾಗಮ ಪದ್ಧತಿ­ಯಲ್ಲಿ ಸೋಮವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ದೇಗು­ಲದಲ್ಲಿ ಬೆಳಿಗ್ಗೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

 ಶಾಸಕ ವಿ.ಮುನಿಯಪ್ಪ ಮತ್ತು ಶಿರಸ್ತೆದಾರ್ ಮಂಜುನಾಥ್ ರಥೋತ್ಸವಕ್ಕೆ ಚಾಲನೆ ನೀಡಿ­ದರು. ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡರು. ತಮಟೆ ವಾದನ, ಮಂಗಳ ವಾದ್ಯಗಳ ಮಧ್ಯೆ ರಥವನ್ನು ಅಶೋಕ ರಸ್ತೆಯಲ್ಲಿ ಮೆರವಣಿಗೆ ಮಾಡ­­ಲಾಯಿತು. ಮಹಿಳೆಯರು ತೆಂಗಿನಕಾಯಿ ಒಡೆದು, ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ಮಯೂರ ವೃತ್ತ­ದಲ್ಲಿ ಪಾನಕ ಮತ್ತು ಹೆಸರುಬೇಳೆ ಹಂಚಲಾಯಿತು.

 ವೇಣುಗೋಪಾಲಸ್ವಾಮಿ ದೇಗುಲ­ದಲ್ಲಿ ಪೂಜಾ ಕಾರ್ಯಕ್ರಮಗಳು ಒಂದು ವಾರದ ಕಾಲ ನಡೆಯಲಿದ್ದು, ನಗರದ ಎಲ್ಲ ಜಾತಿಯವರೂ ವಿವಿಧ ಕೈಂಕರ್ಯ­ಗಳಲ್ಲಿ ಭಾಗಿಯಾಗುವುದು ವಿಶೇಷ­ವಾಗಿದೆ.

ಅರ್ಚಕ ವೈ.ಎನ್‌.ದಾಶರಥಿಭಟ್ಟಾಚಾರ್ಯ, ದೇಗುಲ ಸಮಿತಿ ಸದಸ್ಯರು, ಶ್ರೀ ವೇಣುಗೋಪಾಲಸ್ವಾಮಿ ಸೇವಾ ಮತ್ತು ಅಭಿವೃದ್ಧಿ ಟ್ರಸ್ಟ್‌ ಸದಸ್ಯರು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version