Sidlaghatta : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ವಿಶ್ವಕರ್ಮ ಸಮುದಾಯದಿಂದ ಸೆ.17ರಂದು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ “ವಿಶ್ವಕರ್ಮ ಜಯಂತಿ” ಯನ್ನು ಆಚರಿಸಲಾಗುತ್ತಿದೆ ಎಂದು ತಾಲ್ಲೂಕು ವಿಶ್ವಕರ್ಮ ಸಂಘದ ನಿರ್ದೇಶಕ ಸುಂದರಾಚಾರಿ ತಿಳಿಸಿದರು.
ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಶ್ವ ಕರ್ಮ ಜಯಂತಿಯಲ್ಲಿ ಸಮುದಾಯದ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಮತ್ತು ಪದವಿಯಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು. ಮುಖ್ಯವಾಗಿ ಕುಲ ಕಸಬು ಮಾಡುವ ಐದು ಮಂದಿ ಹಿರಿಯನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದರು.
ಶಾಸಕ ಬಿ.ಎನ್.ರವಿಕುಮಾರ್, ತಹಶೀಲ್ದಾರ್ ಗಗನ ಸಿಂಧು ಸೇರಿದಂತೆ ತಾಲ್ಲೂಕು ಆಡಳಿತವು ಜಯಂತಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಮುಖಂಡರು, ಸಂಘ ಸಂಸ್ಥೆಗಳ ಪ್ರಮುಖರು, ಎಲ್ಲ ಸಮುದಾಯದ ಮುಖಂಡರು ಜಯಂತಿಯಲ್ಲಿ ಭಾಗವಹಿಸಲು ಮನವಿ ಮಾಡಿದರು.
ಶೇ 75ಕ್ಕಿಂತಲೂ ಹೆಚ್ಚು ಅಂಕ ಪಡೆದ ತಾಲ್ಲೂಕಿನ ಸಮುದಾಯದ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನಡೆಸಲಿದ್ದು ಅರ್ಹ ವಿದ್ಯಾರ್ಥಿಗಳು ಸುಂದರಾಚಾರಿ 97312 70250, ಶ್ರೀನಾಥ್ 95381 11910, ಬಿ.ವಿ.ಮಂಜುನಾತ್ 90365 01413 ಸಂಪರ್ಕಿಸಲು ಮನವಿ ಮಾಡಿದರು.
ವಿಶ್ವಕರ್ಮ ಕ್ಷೇಮಾಭಿವೃದ್ದಿ ಸಂಘದ ತಾಲ್ಲೂಕು ಅಧ್ಯಕ್ಷ ಅಮರ ನಾರಾಯಾಣಚಾರಿ, ಶ್ರೀಕಾಳಿಕಾಂಬ ಕಮಠೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಮುನಿರತ್ನಾಚಾರಿ, ಸುಂದರಾಚಾರಿ, ಶ್ರೀನಾಥ್, ಬಿ.ವಿ.ಮಂಜುನಾಥ್, ಚಂದ್ರಶೇಖರ್ ಹಾಜರಿದ್ದರು.








