Home News ವಿಶ್ವಕರ್ಮ ಜಯಂತಿ ಆಚರಣೆ

ವಿಶ್ವಕರ್ಮ ಜಯಂತಿ ಆಚರಣೆ

0
Sidlaghatta Vishvakarma Jayanti

Sidlaghatta : ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ವಿಶ್ವಕರ್ಮ ಸಂಘದ ಸಹಯೋಗದಲ್ಲಿ ಆಚರಿಸಿದ ವಿಶ್ವಕರ್ಮ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಬಿ.ಎಸ್.ರಾಜೀವ್ ಅವರು ಮಾತನಾಡಿದರು.

ವಿಶ್ವಕರ್ಮ ಸಮಾಜವು ಭವ್ಯ ಪರಂಪರೆಯುಳ್ಳ ಸಮಾಜ. ವಾಸ್ತು ಶಿಲ್ಪವನ್ನು ಬಲ್ಲವರು. ಮನೆ, ದೇವಾಲಗಳ ನಿರ್ಮಾಣದಲ್ಲಿ ವಿಶ್ವಕರ್ಮ ಸಮಾಜದ ಕೈಚಳಕವಿದೆ. ಪ್ರತಿಯೊಂದು ಕಲೆಯಲ್ಲೂ ವಿಶ್ವಕರ್ಮ ಸಮಾಜದ ಅವಿಸ್ಮರಣೀಯ ಕೊಡುಗೆಯಿದೆ ಎಂದು ತಿಳಿಸಿದರು.

ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದರು.

ಮುಖ್ಯ ಭಾಷಣಕಾರರಾಗಿದ್ದ ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಕೆ.ಎನ್.ಜನಾರ್ಧನಮೂರ್ತಿ ಮಾತನಾಡಿ, ವಿಶ್ವಕರ್ಮರ ಕೆತ್ತನೆ ಕಾರ್ಯಗಳ ಕಲೆಯು ಇಂದಿನ ಸಮಾಜಕ್ಕೆ ಕೊಡುಗೆ ನೀಡಿರುವುದನ್ನು ನಾವೆಲ್ಲರೂ ಸ್ಮರಿಸಬೇಕಾಗಿದೆ. ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರದಲ್ಲಿ ಅಮರ ಶಿಲ್ಪಿ ಜಕ್ಕಣಾಚಾರಿ ಅವರು ಜನಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ. ವಿಶ್ವಕರ್ಮ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಲು ಪೂರಕವಾದ ವ್ಯವಸ್ಥೆ ಕಲ್ಪಿಸಿದಲ್ಲಿ ಸಮುದಾಯವು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ನುಡಿದರು.

ಎರಡು ಬಾರಿ ರಾಷ್ಟ್ರಪ್ರಶಸ್ತಿ, ತಮಿಳುನಾಡಿನ ಏಷ್ಯಾಟಿಕ್ ಸೊಸೈಟಿಯಿಂದ ಗೌರವ ಡಾಕ್ಟರೇಟ್ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ನಿವೃತ್ತ ಉಪಾಧ್ಯಾಯ ಜಂಗಮಕೋಟೆ ನಂದೀಶ್ ಅವರನ್ನು ಸನ್ಮಾನಿಸಲಾಯಿತು.

ತಾಲ್ಲುಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮೂರ್ತಿ, ನಗರ ಸಭೆ ಪೌರಾಯುಕ್ತ ಶ್ರೀಕಾಂತ್, ನಗರಸಭಾ ಸದಸ್ಯ ಎಲ್.ಅನಿಲ್ ಕುಮಾರ್, ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮರನಾರಾಯಣಾಚಾರಿ, ಕಾಳಿಕಾಂಬ ಕಮಟೇಶ್ವರ ದೇವಾಲಯ ಟ್ರಸ್ಟ್ ಅಧ್ಯಕ್ಷ ಬಿ.ಕೆ.ಮುನಿರತ್ನಾಚಾರಿ, ಪಿಟೀಲು ವಿದ್ವಾಂಸ ಜಗದೀಶ್ ಕುಮಾರ್, ಶ್ರೀನಾಥ್ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version