Home News ಮಹಿಳಾ ದಿನಾಚರಣೆ ಕಾರ್ಯಕ್ರಮ

ಮಹಿಳಾ ದಿನಾಚರಣೆ ಕಾರ್ಯಕ್ರಮ

0
Sidlaghatta womens day programme

ಶಿಡ್ಲಘಟ್ಟ ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುಧವಾರ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(NSUI) ಹಾಗೂ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ NSUI ಮಾಜಿ ರಾಜ್ಯ ಸಂಚಾಲಕ ಕುಂದಲಗುರ್ಕಿ ಮುನೀಂದ್ರ ಮಾತನಾಡಿದರು.

ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ನಿಲ್ಲಬೇಕು. ದೇಶದಲ್ಲಿ ಪ್ರತಿಯೊಬ್ಬ ಮಹಿಳೆಯರು ವಿದ್ಯಾವಂತರಾಬೇಕಾಗಿದೆ. ವಿದ್ಯಾರ್ಥಿನಿಯರು, ಮಹಿಳೆಯರು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು, ನೊಂದ ಮಹಿಳೆಯರ ಪರವಾಗಿ ಬೆಂಬಲಕ್ಕೆ ನಿಲ್ಲುವಂತರಾಗಬೇಕು ಎಂದು ಅವರು ತಿಳಿಸಿದರು.

 ದೇಶದಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆಗಳು ತಡೆಗಟ್ಟಲು ಕಠಿಣ ಕಾನೂನುಗಳನ್ನು ಜಾರಿಗೊಳಿಸಬೇಕು. ಮಹಿಳೆಯರು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಪ್ರಗತಿ ಹೊಂದಿದಾಗ ಮಾತ್ರ ಹೆಣ್ಣು ಮಕ್ಕಳಿಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಂತಾಗುತ್ತದೆ. ಅಧಿಕಾರಕ್ಕೆ ಬಂದ ಅನೇಕ ಮಹಿಳೆಯರು ತನ್ನ ಅಧಿಕಾರವನ್ನು ಗಂಡಂದಿರಿಗೆ ನೀಡುವ ಮುಖಾಂತರ ಪುರುಷ ಪ್ರಾಧಾನ್ಯವನ್ನು ಪ್ರೋತ್ಸಾಹಿಸಿವುದನ್ನು ಬಿಟ್ಟು ಮಹಿಳೆಯರೇ ತಮ್ಮ ತಮ್ಮ ಅಧಿಕಾರವನ್ನು ಚಲಾವಣೆ ಮಾಡುವಂತಾಗಬೇಕು ಎಂದರು.

 ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಂಗೋಲಿ, ಮೆಹಂದಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.

 ಕಾಲೇಜಿನ ಸಾಂಸ್ಕೃತಿಕ ಸಮಿತಿಯ ಸಂಚಾಲಕ, ಉಪನ್ಯಾಸಕ ಡಾ.ವೆಂಕಟೇಶ್ ಮಾತನಾಡಿ ಮಹಿಳೆಯರು ಎಲ್ಲ ರಂಗಗಳಲ್ಲೂ ಮುನ್ನುಗ್ಗಿ ಈ ದೇಶದಲ್ಲಿ ಬದಲಾವಣೆ  ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

 ಪ್ರಾಂಶುಪಾಲ ನರಸಿಂಹಮೂರ್ತಿ, ಉಪನ್ಯಾಸಕರಾದ ವೆಂಕಟರವಣಪ್ಪ, ರಮೇಶ್, ಶಶಿಕಲಾ, ಕಮಲ ಎನ್‌ಎಸ್‌ಯುಐ ತಾಲ್ಲೂಕು ಕಾರ್ಯದರ್ಶಿ ಪ್ರಸನ್ನಕುಮಾರ್ ಹಾಜರಿದ್ದರು

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version