Home News ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೇ ಮಾದರಿ ಸರ್ಕಾರಿ ನೌಕರರ ಭವನ ಶಿಡ್ಲಘಟ್ಟದಲ್ಲಿ ನಿರ್ಮಾಣ: ಕೆ ಎನ್ ಸುಬ್ಬಾರೆಡ್ಡಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೇ ಮಾದರಿ ಸರ್ಕಾರಿ ನೌಕರರ ಭವನ ಶಿಡ್ಲಘಟ್ಟದಲ್ಲಿ ನಿರ್ಮಾಣ: ಕೆ ಎನ್ ಸುಬ್ಬಾರೆಡ್ಡಿ

0

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಸರ್ಕಾರಿ ನೌಕರರ ಸುಮಾರು ವರ್ಷಗಳ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದು ಜಿಲ್ಲೆಯಲ್ಲಿಯೇ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮಾದರಿ ಸರ್ಕಾರಿ ನೌಕರರ ಭವನ ನಿರ್ಮಾಣ ಮಾಡಲಾಗುವುದು ಎಂದು ತಾಲ್ಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬಾರೆಡ್ಡಿ ತಿಳಿಸಿದರು.

ನಗರದ ಸರ್ಕಾರಿ ಪ್ರೌಡಶಾಲೆ ಆವರಣದಲ್ಲಿ ಸರ್ಕಾರಿ ನೌಕರರ ಭವನದ ಕಾಮಗಾರಿಗೆ ಅಡಿಗಲ್ಲು ಪೂಜೆ ನೆರವೇರಿಸಿ ಅವರು ಮಾತನಾಡಿದರು

ಇತ್ತೀಚಿಗೆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ, ಸರ್ಕಾರಿ ನೌಕರರ ಭವನ ಹಾಗೂ ಗುರುಭವನ ಕಾಮಗಾರಿಯನ್ನು ಆರಂಭಿಸಲು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ ಸಿ ಸುಧಾಕರ್ ಹಾಗೂ ಶಾಸಕ ಮೇಲೂರು ರವಿಕುಮಾರ್ ಅವರು ಭೂಮಿಪೂಜೆಯನ್ನು ನೆರವೇರಿಸಿದ್ದರು. ಶಾಸಕ ರವಿಕುಮಾರ್ ಅವರು ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 20 ಲಕ್ಷ ರೂಗಳ ಅನುದಾನವನ್ನು ಮಂಜೂರು ಮಾಡಿದ್ದಾರೆ. ಇನ್ನು ಅಧಿಕ ಅನುದಾನದ ಅಗತ್ಯವಿದ್ದು ಸಂಸದರ ಹಾಗೂ ವಿಧಾನಪರಿಷತ್ ಸದಸ್ಯರ ಸಹಕಾರದಿಂದ ಸರ್ಕಾರಿ ನೌಕರರ ಭವನವನ್ನು ಮಾದರಿಯಾಗಿ ನಿರ್ಮಿಸಲಾಗುವುದೆಂದರು.

ಸರ್ಕಾರಿ ನೌಕರರಿಗೆ ಸರ್ವ ರೀತಿಯ ಸೌಲಭ್ಯಗಳನ್ನು ಕಲ್ಪಿಸಲು ಮೂರು ಅಂತಸ್ತಿನ ಕಟ್ಟಡ ತಲೆ ಎತ್ತಲಿದ್ದು ಇಡೀ ಜಿಲ್ಲೆಯಲ್ಲಿ ಮಾದರಿ ಭವನ ನಿರ್ಮಾಣ ಮಾಡಲು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಎನ್. ಸುಬ್ಬಾರೆಡ್ಡಿ ಮತ್ತು ಪದಾಧಿಕಾರಿಗಳು ಸಂಕಲ್ಪ ಮಾಡಿದ್ದು ಅದಕ್ಕಾಗಿ ಇನ್ನಷ್ಟು ಅನುದಾನ ಕ್ರೂಡಿಕರಿಸಲು ಈಗಾಗಲೇ ಸಿದ್ಧತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ತಹಶೀಲ್ದಾರ್ ಗಗನ ಸಿಂಧು, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ವೆಂಕಟೇಶ್ ಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಅಕ್ಕಲರೆಡ್ಡಿ, ಉಪಾಧ್ಯಕ್ಷ ಮಧುಸೂದನ್, ಪ್ರಧಾನ ಕಾರ್ಯದರ್ಶಿ ಅಪ್ಪೇಗೌಡನಹಳ್ಳಿ ಕೆಂಪೇಗೌಡ, ಖಜಾಂಚಿ ವಸಂತ್ ಕುಮಾರ್, ಟಿ. ಟಿ. ನರಸಿಂಹಪ್ಪ, ಎನ್‌.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಗಜೇಂದ್ರ, ಪ್ರಧಾನ ಕಾರ್ಯದರ್ಶಿ ನರಸಿಂಹರಾಜು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರವಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ, ಬಿ ಇ ಓ ನರೇಂದ್ರ ಕುಮಾರ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ತಿಮ್ಮರಾಜು, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವಿ. ವೆಂಕಟರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಅರುಣಮ್ಮ, ಸಂಘದ ಪದಾಧಿಕಾರಿಗಳಾದ ಲಲಿತಮ್ಮ ಟಿಪ್ಪು ಸುಲ್ತಾನ್ ಹಾಜರಿದ್ದರು.

For Daily Updates WhatsApp ‘HI’ to 7406303366

Namma Sidlaghatta WhatsApp Channel

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version