Home News ಬೊಲೆರೋ, ಬೈಕ್ ನಡುವೆ ಭೀಕರ ಅಪಘಾತ

ಬೊಲೆರೋ, ಬೈಕ್ ನಡುವೆ ಭೀಕರ ಅಪಘಾತ

0
Sidlaghatta Hunasenahalli Bolero Bike Accident

Y Hunasenahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ವೈ.ಹುಣಸೆಹಳ್ಳಿ ಸ್ಟೇಷನ್ ರಾಷ್ಟ್ರೀಯ ಹೆದ್ದಾರಿ 234 ರಸ್ತೆಯಲ್ಲಿ ಸೋಮವಾರ ತಡರಾತ್ರಿ ಬೊಲೆರೋ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನದಲ್ಲಿದ್ದ ಮೂರು ಜನ ಗಾಯಗೊಂಡಿದ್ದು, ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ವೈ.ಹುಣಸೇನಹಳ್ಳಿ ಗ್ರಾಮದ ಮೋಹನ್(35) ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈ.ಹುಣಿಸೇನಹಳ್ಳಿ ರೈಲ್ವೆ ಬ್ರಿಡ್ಜ್ ಕೆಳಸೇತುವೆ ರಸ್ತೆ ಬಳಿ ದುರಸ್ತಿ ಕಾಮಗಾರಿ ನಡೆಯುತ್ತಿದ್ದು , ಒಂದು ಕಡೆ ರಸ್ತೆಯನ್ನು ವಾಹನಗಳು ಸಂಚರಿಸದಂತೆ ನಿರ್ಬಂಧಿಸಲಾಗಿತ್ತು. ಎರಡೂ ಕಡೆಯ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಒಂದೇ ರಸ್ತೆಯಲ್ಲಿ ಸಂಚರಿಸುತಿದ್ದವು ಇದರಿಂದ ಅಪಘಾತ ನಡೆದಿದೆ ಎನ್ನಲಾಗುತ್ತಿದೆ.

ಅಪಘಾತ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version