ಪೂರ್ಣ ಪುಟ · Open full page

ರೇಷ್ಮೆ ಬೆಳೆಗಾರರ ಸಂಘದ ಚುನಾವಣೆ: ಮೊದಲ ದಿನವೇ ನಾಮಪತ್ರಗಳ ಸಾಲು, 12 ಸ್ಥಾನಕ್ಕೆ ಮೂರು ಪಕ್ಷಗಳ ಬೆಂಬಲಿತರ ಪೈಪೋಟಿ

Aspirants and supporters submitting nomination papers at the election officer counter for the silk growers and farmers service cooperative society

Sidlaghatta : ರೇಷ್ಮೆ ಬೆಳೆಗಾರರ ಸಂಘದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಗುರುವಾರ ಆರಂಭವಾಗಿದ್ದು, ಮೊದಲ ದಿನವೇ ಹಲವು ಆಕಾಂಕ್ಷಿಗಳು ತಮ್ಮ ಬೆಂಬಲಿಗರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು.

ಶಿಡ್ಲಘಟ್ಟ ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಆಕಾಂಕ್ಷಿಗಳು ಎಸ್‌ಎಫ್‌ಎಸ್‌ ಬ್ಯಾಂಕ್ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಯಾವ ಕ್ಷೇತ್ರಕ್ಕೆ ಎಷ್ಟು ಸ್ಥಾನ

ಒಟ್ಟು 12 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಾಲಗಾರರ ಕ್ಷೇತ್ರದಿಂದ 10 ಸ್ಥಾನಗಳಿದ್ದು, ಇವುಗಳಲ್ಲಿ ಹಿಂದುಳಿದ ವರ್ಗ ಎ-1, ಹಿಂದುಳಿದ ವರ್ಗ ಬಿ-1, ಪರಿಶಿಷ್ಟ ಜಾತಿ-1, ಪರಿಶಿಷ್ಟ ಪಂಗಡ-1, ಮಹಿಳಾ ಮೀಸಲು-2 ಹಾಗೂ ಸಾಮಾನ್ಯ ಕ್ಷೇತ್ರ-4 ಸ್ಥಾನಗಳನ್ನು ಮೀಸಲಿಡಲಾಗಿದೆ. ಇದರ ಜತೆಗೆ ಸಾಲಗಾರರಲ್ಲದ ಕ್ಷೇತ್ರದ 1 ಮತ್ತು ಠೇವಣಿದಾರರ ಕ್ಷೇತ್ರದ 1 ಸ್ಥಾನಕ್ಕೂ ಮತದಾನ ನಡೆಯಲಿದೆ.

ಮುಂದಿನ ದಿನಾಂಕಗಳು

ನವೆಂಬರ್ 14ರ ಶನಿವಾರ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ನ.15ರ ಭಾನುವಾರ ನಾಮಪತ್ರಗಳ ಪರಿಶೀಲನೆ ನಡೆದು, ಕ್ರಮಬದ್ಧ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ.

ನ.16ರ ಸೋಮವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂತೆಗೆದುಕೊಳ್ಳಲು ಅವಕಾಶ. ಅದೇ ದಿನ ಕಣದಲ್ಲಿ ಉಳಿಯುವ ಅಂತಿಮ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದ್ದು, ಚಿಹ್ನೆ ಹಂಚಿಕೆಯೂ ನಡೆಯಲಿದೆ.

ನ.22ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ನಡೆಯಲಿದೆ. ಮತದಾನ ಮುಗಿದ ಬಳಿಕ ಅದೇ ದಿನ ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಯಾಗಲಿದೆ. ಎನ್. ವನಿತಾ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಂಬಂಧಿತ ಸುದ್ದಿ: ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಚುನಾವಣೆ ನವೆಂಬರ್ 22ಕ್ಕೆ: 12 ಸ್ಥಾನಗಳಿಗೆ ಮತದಾನ | ಹಾಲು ಉತ್ಪಾದಕರ ಮಹಿಳಾ ಸಂಘಕ್ಕೆ ಅಧ್ಯಕ್ಷೆ, ಉಪಾಧ್ಯಕ್ಷೆ ಅವಿರೋಧ ಆಯ್ಕೆ

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

Nearby

ಇದನ್ನೂ ಓದಿ

Exit mobile version