SIR ಮತದಾರರ ಪಟ್ಟಿ ಪರಿಷ್ಕರಣೆ: ಕಡ್ಡಾಯ ಭಾಗವಹಿಸುವಿಕೆಗೆ ಕರೆ

- Advertisement -
- Advertisement -

Sidlaghatta : ವಿಶೇಷ ಸಮಗ್ರ ಪರಿಷ್ಕರಣೆ (SIR) ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಜಿಲ್ಲೆಯ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಭದ್ರಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ನವೀನ್ ಭಟ್ ಮನವಿ ಮಾಡಿದರು. ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲ್ಲೂಕು ಸ್ವೀಪ್ ಸಮಿತಿಯ ಸಹಯೋಗದಲ್ಲಿ ಶನಿವಾರ ನಗರದ ಬಸ್ ನಿಲ್ದಾಣದಿಂದ SIR ಮತದಾರರ ಪಟ್ಟಿ ಜಾಗೃತಿ ಕಾಲ್ನಡಿಗೆ ಜಾಥಾವನ್ನು ಜಿಲ್ಲಾಧಿಕಾರಿ ಜಿ. ಪ್ರಭು ಮತ್ತು ಡಾ. ನವೀನ್ ಭಟ್ ಪಾರಿವಾಳ ಹಾರಿಸಿ, ಹಸಿರು ನಿಶಾನೆ ತೋರುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸಿ.ಇ.ಒ ಡಾ. ನವೀನ್ ಭಟ್, ತಾಲ್ಲೂಕಿನ 28 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ SIR ಕುರಿತು ಮನೆ–ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ. ಸ್ವಚ್ಛತಾ ವಾಹನಗಳ ಮೂಲಕವೂ ನಾಗರಿಕರಿಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ. ಮತಗಟ್ಟೆ ಮಟ್ಟದ ಅಧಿಕಾರಿಗಳ (ಬಿ.ಎಲ್‌.ಒ) ಜೊತೆಗೆ ಪಿಡಿಒಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಸಹಾಯಕರು, ಡಿಇಒಗಳು, ಕರ ವಸೂಲಿಕಾರರು ಹಾಗೂ ನೀರುಗಂಟಿಗಳನ್ನು ನಿಯೋಜಿಸಿ ಪರಿಷ್ಕರಣೆ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ನಗರದ ಬಸ್ ನಿಲ್ದಾಣದಿಂದ ಪ್ರವಾಸಿ ಮಂದಿರದವರೆಗೆ ನಡೆದ ಜಾಥಾದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಸ್ವಸಹಾಯ ಸಂಘದ ಸದಸ್ಯರು, ವಿಕಲಚೇತನರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು. SIR ಕುರಿತು ಘೋಷವಾಕ್ಯಗಳಿರುವ ಫಲಕಗಳನ್ನು ಪ್ರದರ್ಶಿಸಿ, ಡೊಳ್ಳು ಕುಣಿತದ ಮೂಲಕ ಸಾರ್ವಜನಿಕರಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಚಿಕ್ಕಬಳ್ಳಾಪುರ ಹಾಗೂ ಚಿಂತಾಮಣಿ ರಸ್ತೆ ವೃತ್ತದ ಬಳಿ ಮಾನವ ಸರಪಳಿಯನ್ನೂ ರಚಿಸಲಾಯಿತು.

ರಾಜ್ಯದಲ್ಲೇ ಜಿಲ್ಲೆ ಮೊದಲ ಸ್ಥಾನ ಹೇಗೆ?

ಜಿಲ್ಲಾಧಿಕಾರಿ ಜಿ. ಪ್ರಭು ಮಾತನಾಡಿ, ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕಳೆದ ತಿಂಗಳ 29ರಿಂದ SIR ಕಾರ್ಯ ಆರಂಭಿಸಲಾಗಿದೆ. ಬಿ.ಎಲ್‌.ಒಗಳು, ಮೇಲ್ವಿಚಾರಕರು, ಸಹಾಯಕ ಚುನಾವಣಾ ನೋಂದಣಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಪರಿಶ್ರಮದಿಂದ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದರು. ಕೇವಲ 17 ದಿನಗಳಲ್ಲಿ ಶೇ. 76.68ರಷ್ಟು ಮತದಾರರನ್ನು ಕರಡು ಮತದಾರರ ಪಟ್ಟಿಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದೇವೆ. 24 ವರ್ಷಗಳ ಬಳಿಕ ನಡೆಯುತ್ತಿರುವ ಈ ವಿಶೇಷ ಸಮಗ್ರ ಪರಿಷ್ಕರಣೆ ಅತ್ಯಂತ ಮಹತ್ವದ್ದಾಗಿದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು ಹಾಗೂ ಅನರ್ಹರು ಸೇರ್ಪಡೆಯಾಗಬಾರದು ಎಂಬ ಉದ್ದೇಶದಿಂದ ಈ ಕಾರ್ಯ ಕೈಗೊಳ್ಳಲಾಗಿದೆ. ಪ್ರಜಾಪ್ರಭುತ್ವದಲ್ಲಿ ಚುನಾವಣೆ ನಿರ್ಣಾಯಕವಾಗಿದ್ದು, ಅದರ ಅಡಿಪಾಯವೇ ಮತದಾರರ ಪಟ್ಟಿ ಎಂದು ಹೇಳಿದರು.

ಯಾರಿಗೆ ಸನ್ಮಾನ?

ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ SIR ಕಾರ್ಯದಲ್ಲಿ ಶೇ. 100ರಷ್ಟು ಪ್ರಗತಿ ಸಾಧಿಸಿದವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಜಿಲ್ಲೆಯಲ್ಲೇ ಮೊದಲ ಬಾರಿಗೆ ಶೇ 100ರಷ್ಟು ಪ್ರಗತಿ ಸಾಧಿಸಿದ ವೆಂಕಟಲಕ್ಷ್ಮಿ ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅತೀಕ್ ಪಾಷಾ, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಎಸ್.ಎಸ್.ಆಬಿದ್, ತಾಲ್ಲೂಕು ಪಂಚಾಯಿತಿ ಇಒ ಆರ್.ಹೇಮಾವತಿ, ತಹಶೀಲ್ದಾರ್ ಗಗನ ಸಿಂಧು, ಪೌರಾಯುಕ್ತೆ ಅಮೃತ, ತಾಲ್ಲೂಕು ಯೋಜನಾಧಿಕಾರಿ ಅನಿಲ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ತಾಲ್ಲೂಕು ಆಡಳಿತದ ಸಿಬ್ಬಂದಿ ಹಾಜರಿದ್ದರು.

SIR ಪ್ರಕ್ರಿಯೆಯ ಇತರ ಬೆಳವಣಿಗೆಗಳ ಬಗ್ಗೆ ಗಣತಿ ಫಾರಂ ಡಿಜಿಟಲೀಕರಣ ವರದಿ ಹಾಗೂ ಶೇ 100ರಷ್ಟು ನಮೂನೆ ವಿತರಣೆ ಸುದ್ದಿಯನ್ನೂ ಓದಿ.

FAQ

SIR (ವಿಶೇಷ ಸಮಗ್ರ ಪರಿಷ್ಕರಣೆ) ಎಂದರೇನು?
24 ವರ್ಷಗಳ ಬಳಿಕ ನಡೆಯುತ್ತಿರುವ ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆ ಪ್ರಕ್ರಿಯೆ. ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಮತ್ತು ಅನರ್ಹರು ಸೇರ್ಪಡೆಯಾಗದಂತೆ ನೋಡಿಕೊಳ್ಳುವುದು ಇದರ ಉದ್ದೇಶ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ SIR ಪ್ರಗತಿ ಎಷ್ಟು?
17 ದಿನಗಳಲ್ಲಿ ಶೇ. 76.68ರಷ್ಟು ಮತದಾರರನ್ನು ಕರಡು ಪಟ್ಟಿಗೆ ಸೇರಿಸಲಾಗಿದ್ದು, ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

In English: Chikkaballapur district administration held an SIR (Special Intensive Revision) voter list awareness jatha from Sidlaghatta bus stand on Saturday, led by District Collector G. Prabhu and Zilla Panchayat CEO Dr. Naveen Bhat. Officials said the district has added 76.68% of voters to the draft roll in 17 days, ranking first in Karnataka, and felicitated 100%-progress achievers including Venkatalakshmi. The CEO urged all eligible voters to participate to secure their voting rights.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!