ಪೂರ್ಣ ಪುಟ · Open full page

ಆರನೇ ಪ್ರಜಾಸೇವಾ ಆಂದೋಲನ: ವಿಧವಾ ವೇತನ, ಮಂಜೂರಾತಿ ಪತ್ರ ವಿತರಣೆ, ಆರೋಗ್ಯ ಶಿಬಿರ, ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ

MLA B.N. Ravikumar giving chocolates to students sitting on the floor at the Prajaseva Andolana

Sidlaghatta : ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವನ್ನು ಶಾಸಕ ಬಿ.ಎನ್. ರವಿಕುಮಾರ್ ಅವರು ಜವಾಹರಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ತಾಲ್ಲೂಕಿನಲ್ಲಿ ನಡೆಯುತ್ತಿರುವ ಆರನೇ ಪ್ರಜಾಸೇವಾ ಆಂದೋಲನ ಇದಾಗಿದ್ದು, ಸಾರ್ವಜನಿಕರು ಸಮಸ್ಯೆ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸಲಾಗಿದೆ ಎಂದು ಶಾಸಕರು ಹೇಳಿದರು. ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಕೊರತೆ ನೀಗಿಸಲು ಹಾಗೂ ಜನರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಮಕ್ಕಳ ದಿನಾಚರಣೆ: ಚಿತ್ರಕಲಾ ಸ್ಪರ್ಧೆ, ನೃತ್ಯ

ಮಕ್ಕಳ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಚಾಕೊಲೇಟ್ ಮತ್ತು ಬಿಸ್ಕತ್ ವಿತರಿಸಲಾಯಿತು. ಗಂಜಿಗುಂಟೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು. ಪಂಚಾಯಿತಿ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ನಡೆಸಿ, ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನದ ಪ್ರಮಾಣಪತ್ರ ನೀಡಲಾಯಿತು.

ವಿಧವಾ ವೇತನ, ಮಂಜೂರಾತಿ ಪತ್ರ, ಆರೋಗ್ಯ ಶಿಬಿರ

ವಿಶೇಷಚೇತನರು ಮತ್ತು ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ಮಂಜೂರಾತಿ ಹಾಗೂ ದೃಢೀಕರಣ ಪತ್ರಗಳನ್ನು ವಿತರಿಸಲಾಯಿತು. ವಿಧವಾ ವೇತನ ಸೇರಿದಂತೆ ಹಲವು ಸರ್ಕಾರಿ ಯೋಜನೆಗಳ ಸೌಲಭ್ಯ ಒದಗಿಸಲಾಯಿತು. ಸಾರ್ವಜನಿಕರ ಆರೋಗ್ಯ ತಪಾಸಣೆಗೆ ಆರೋಗ್ಯ ಶಿಬಿರ ಏರ್ಪಡಿಸಲಾಗಿತ್ತು.

ವಿಬಿ-ಜಿ-ರಾಮ್-ಜಿ ಯೋಜನೆಯ ಕುರಿತು ಅಧಿಕಾರಿಗಳು ಮಾಹಿತಿ ನೀಡಿ, ಕಾಮಗಾರಿ ಕೈಗೊಳ್ಳಲಿರುವ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿದರು. ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಯಿತು.

ಜಿಲ್ಲಾ ಭೂ ದಾಖಲೆಗಳ ಉಪನಿರ್ದೇಶಕ ಮಂಜುನಾಥ, ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ ಆರ್., ತಹಶೀಲ್ದಾರ್ ಗಗನಸಿಂಧು, ಸರ್ಕಲ್ ಇನ್‌ಸ್ಪೆಕ್ಟರ್ ಆನಂದಕುಮಾರ್, ಸಬ್ ಇನ್‌ಸ್ಪೆಕ್ಟರ್ ನಾಗರಾಜು, ಗ್ರೇಡ್-2 ತಹಶೀಲ್ದಾರ್ ಮಂಜುನಾಥ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು. ಬಶೆಟ್ಟಹಳ್ಳಿ ಹೋಬಳಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮುಖಂಡರಾದ ತಾದೂರು ರಘು, ಮೇಲೂರು ಮಂಜುನಾಥ್, ನರಸಿಂಹಮೂರ್ತಿ, ನಾಗನೂರು ರವಿ, ಜನಾರ್ದನ ರೆಡ್ಡಿ, ಮೌಲಾ, ಜನಪ್ರತಿನಿಧಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸಂಬಂಧಿತ ಸುದ್ದಿ: ಸಣ್ಣಪುಟ್ಟ ಕೆಲಸಕ್ಕೆ ಕಚೇರಿ ಅಲೆದಾಟ ತಪ್ಪಿಸಲು ಪ್ರಜಾಸೇವಾ ಆಂದೋಲನ: ಶನಿವಾರ ಗ್ರಾಮ ಒನ್ ಕೌಂಟರ್‌ನಲ್ಲಿ ಉಚಿತ ಆನ್‌ಲೈನ್ ಅರ್ಜಿ | ಪ್ರಜಾಸೇವಾ ಆಂದೋಲನದಲ್ಲಿ 600ಕ್ಕೂ ಹೆಚ್ಚು ಅರ್ಜಿ: KIADBಗೆ ಜಮೀನು ನೀಡಲು ಒಪ್ಪದ ಸುಮಾರು 200 ರೈತರು

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

Nearby

ಇದನ್ನೂ ಓದಿ

Exit mobile version