Home News ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಕಚೇರಿಯ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಕಚೇರಿಯ ಉದ್ಘಾಟನೆ

0
Dharmasthala sangha new office inauguration sidlaghatta

ನಗರದ ರಾಘವೇಂದ್ರ ಸ್ವಾಮಿ ಸೇವಾ ಟ್ರಸ್ಟ್ ನ ಕಟ್ಟಡದಲ್ಲಿ ನೂತನವಾಗಿ ಆರಂಭಗೊಂಡ ಯೋಜನಾ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಸೀನಪ್ಪ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಕಳೆದ 7 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು 3,000 ಸಂಘಗಳನ್ನು ರಚನೆ ಮಾಡಿ ಸುಮಾರು 25,000 ಮಂದಿ ಸದಸ್ಯರನ್ನೊಳಗೊಂಡು ಸಾವಿರಾರು ಕುಟುಂಬಗಳ ಅಭಿವೃದ್ಧಿಯ ಜೊತೆಗೆ ದೀನ ದಲಿತರಿಗೆ ಆಸರೆಯಾಗಿದೆ ಎಂದು ಅವರು ತಿಳಿಸಿದರು.

ಧರ್ಮಸ್ಥಳ ಯೋಜನೆಯ ಸಮಾಜಮುಖಿ ಕಾರ್ಯಕ್ರಮಗಳು ನೂರಾರು. ಇಂತಹ ಕಾರ್ಯಕ್ರಮಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವುದು ಧರ್ಮಾಧಿಕಾರಿಗಳ ಆಶಯ. ಈ ನಿಟ್ಟಿನಲ್ಲಿ ಆಯಾ ಭಾಗದ ಜನಪ್ರತಿನಿಧಿಗಳು, ಗಣ್ಯರು ಊರಿನವರ ಸಹಕಾರದೊಂದಿಗೆ ಯಶಸ್ವಿ 7 ವರ್ಷಗಳನ್ನು ಪೂರೈಸಿ ಯೋಜನೆ ಮುನ್ನಡೆಯುತ್ತಿದೆ. ಇನ್ನೂ ಹೆಚ್ಚಿನ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಗಣ್ಯರ ಸಹಕಾರ ಅವಶ್ಯಕವಾಗಿದೆ ಎಂದು ಹೇಳಿದರು.

 ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕ ಪ್ರಶಾಂತ್, ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಎಂ.ಐ.ಎಸ್ ಯೋಜನಾಧಿಕಾರಿ ನಾಗರಾಜ್, ಧನಂಜಯ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಎ.ಎಂ.ತ್ಯಾಗರಾಜ್, ಸುರೇಶ್, ವೆಂಕಟಸ್ವಾಮಿ ರೆಡ್ಡಿ, ರಾಘವೇಂದ್ರ ಸ್ವಾಮಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳಾದ ರವಿ, ನಾಗರಾಜರಾವ್, ಶ್ರೀಕಾಂತ್, ಕೃಷ್ಣಮೂರ್ತಿ, ಶಂಕರ್ ರಾವ್, ಸುಧೀಂದ್ರ, ಅರ್ಚಕ ಕೃಷ್ಣಮೂರ್ತಿ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version