Home News ಸಿರಿಧಾನ್ಯ ಬೇಸಾಯ ಪದ್ಧತಿ ಬಗ್ಗೆ ತರಬೇತಿ

ಸಿರಿಧಾನ್ಯ ಬೇಸಾಯ ಪದ್ಧತಿ ಬಗ್ಗೆ ತರಬೇತಿ

0
Sri Kshetra Dharmashtala Gramabhivruddi yojane SKDRDP Sidlaghatta

ಶಿಡ್ಲಘಟ್ಟ ತಾಲ್ಲೂಕಿನ ಕನ್ನಪ್ಪನಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರೈತ ಮನೋಹರ ರವರ ಮನೆಯಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಬೇಸಾಯ ಪದ್ಧತಿ ಬಗ್ಗೆ ತರಬೇತಿ ಶಿಬಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಮೇಲ್ವಿಚಾರಕ ಹರೀಶ್ ಕುಮಾರ್ ಮಾತನಾಡಿದರು.

ಸಿರಿಧಾನ್ಯಗಳಲ್ಲಿ ಹೇರಳ ವಾದ ನಾರಿನಂಶ ಇರುವುದರಿಂದ ಸಿರಿಧಾನ್ಯ ಬಳಕೆಯಿಂದ ಉತ್ತಮ ಆರೋಗ್ಯ ಗಳಿಸಬಹುದು. ಬರ ಸಹಿಷ್ಣು ಬೆಳೆಗಳಾದ ಸಿರಿಧಾನ್ಯಗಳನ್ನು ಬೆಳೆಯುವುದರಿಂದ ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯವನ್ನು ಗಳಿಸಬಹುದು. ರೈತರು ಸಿರಿಧಾನ್ಯಗಳನ್ನು ಬೆಳೆಯಲು ಮುಂದೆ ಬಂದಲ್ಲಿ ಬಿತ್ತನೆ ಬೀಜಗಳನ್ನು ಒದಗಿಸಿ ಕೊಡಲಾಗುವುದು ಎಂದು ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ರೈತ ಸಂಘದ ತಾಲ್ಲೂಕು ಉಪಾಧ್ಯಕ್ಷ ಮಂಜುನಾಥ, ಸೇವಾಪ್ರತಿನಿಧಿ ಚೈತ್ರ, ಹಾಗೂ ಸುತ್ತಮುತ್ತಲಿನ ರೈತ ಮುಖಂಡರು ಭಾಗವಹಿಸಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version