Home News ಮಾರ್ಚ್ 18ರಿಂದ SSLC ಪರೀಕ್ಷೆ: ಮೊದಲ ಸ್ಥಾನ ಗುರಿ-ಶಾಸಕ ಬಿ.ಎನ್. ರವಿಕುಮಾರ್

ಮಾರ್ಚ್ 18ರಿಂದ SSLC ಪರೀಕ್ಷೆ: ಮೊದಲ ಸ್ಥಾನ ಗುರಿ-ಶಾಸಕ ಬಿ.ಎನ್. ರವಿಕುಮಾರ್

0
SSLC Exam Higher Ranks Target MLA B N Ravikumar

Melur, sidlaghatta : ಮಾರ್ಚ್ 18ರಿಂದ ಆರಂಭವಾಗಲಿರುವ SSLC ಪರೀಕ್ಷೆಯ ಪೂರ್ವಭಾವಿ ಸಿದ್ಧತೆಗಳು ಪೂರ್ಣಗೊಂಡಿವೆ. ಜಿಲ್ಲೆಯಲ್ಲಿ ಶಿಡ್ಲಘಟ್ಟ ತಾಲ್ಲೂಕು ಪ್ರಥಮ ಸ್ಥಾನ ಪಡೆಯುವ ಗುರಿಯನ್ನು ಹೊಂದಿದ್ದೇವೆ ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು.

ತಾಲ್ಲೂಕಿನ ಮೇಲೂರಿನ ಗೃಹಕಚೇರಿಯಲ್ಲಿ ಅವರು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್ ಹಾಗೂ ಜಿಲ್ಲೆಯ ಡಿಡಿಪಿಐ ರಮೇಶ್ ಅವರ ನೇತೃತ್ವದಲ್ಲಿ ಈಗಾಗಲೇ ಸಭೆ ನಡೆಸಲಾಗಿದೆ. ಸಭೆಯಲ್ಲಿ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಕರೆಸಿ, 2025-26ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಇಡೀ ಜಿಲ್ಲೆಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಮೊದಲ ಸ್ಥಾನ ಪಡೆಯಬೇಕು ಎಂಬ ಗುರಿಯನ್ನು ನೀಡಲಾಗಿದೆ ಎಂದು ಹೇಳಿದರು.

ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಮೊದಲನೇ ತರಗತಿಯಿಂದ 10ನೇ ತರಗತಿವರೆಗೆ ಒಟ್ಟು 12,860 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಈ ಬಾರಿ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗೆ 945 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ಈ ವಿದ್ಯಾರ್ಥಿಗಳಲ್ಲಿ ಸರ್ಕಾರಿ ಶಾಲೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆಯುವ ವಿದ್ಯಾರ್ಥಿಗೆ ಶಾಸಕರ ನಿಧಿಯಿಂದ ₹1 ಲಕ್ಷ ಪ್ರೋತ್ಸಾಹಧನ ನೀಡಲಾಗುವುದು ಎಂದು ಈಗಾಗಲೇ ಘೋಷಣೆ ಮಾಡಿದ್ದೇನೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಹುತೇಕ ವಿದ್ಯಾರ್ಥಿಗಳು ಬಡ ಕುಟುಂಬಗಳಿಗೆ ಸೇರಿದವರಾಗಿರುವುದರಿಂದ, ಅವರಿಗೆ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬ ಉದ್ದೇಶದಿಂದ ಎಲ್ಲಾ ಶಾಲೆಗಳಲ್ಲಿ ಸಭೆಗಳನ್ನು ನಡೆಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಇದೇ ವೇಳೆ ಕಳೆದ ಎರಡು ವರ್ಷಗಳ ಫಲಿತಾಂಶಗಳ ಕುರಿತು ಉಲ್ಲೇಖಿಸಿದ ಅವರು, 2023-24ರಲ್ಲಿ ಕ್ಷೇತ್ರ ಮೂರನೇ ಸ್ಥಾನದಲ್ಲಿದ್ದರೆ, 2024-25ರಲ್ಲಿ ಎರಡನೇ ಸ್ಥಾನಕ್ಕೇರಿದೆ. ಈ ಬಾರಿ ಮೊದಲ ಸ್ಥಾನ ಗಳಿಸುವ ವಿಶ್ವಾಸ ವ್ಯಕ್ತಪಡಿಸಿದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version