Home News ಜಿಲ್ಲೆಯ ಅಧಿಕಾರಿಗಳಿಗೆ ರಾಜ್ಯ ಪ್ರಶಸ್ತಿ

ಜಿಲ್ಲೆಯ ಅಧಿಕಾರಿಗಳಿಗೆ ರಾಜ್ಯ ಪ್ರಶಸ್ತಿ

0
Karnataka Government State Award for Administration Sidlaghatta

ಮಹಾತ್ಮಾ ಗಾಂಧಿ ನರೇಗಾ ಯೋಜನೆಯ 2020-21 ನೇ ಸಾಲಿನ ರಾಜ್ಯಮಟ್ಟದ ಪ್ರಶಸ್ತಿಗಳನ್ನು ಸರ್ಕಾರ ಘೋಷಿಸಿದ್ದು, ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ನರೇಗಾ ಯೋಜನೆ ಅನುಷ್ಠಾನಗೊಳಿಸಿದ ಹಲವು ಅಧಿಕಾರಿಗಳು ಪ್ರಶಸ್ತಿಗೆ ಭಾಜನರಾಗಲಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭವು ಹುಬ್ಬಳ್ಳಿಯಲ್ಲಿ ಏಪ್ರಿಲ್ 9 ರಂದು ನಡೆಯಲಿದೆ.

 ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ನಿಕಟಪೂರ್ವ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಎಂ.ಐ.ಎಸ್ ಸಂಯೋಜಕ ಜಿ.ಎಲ್.ಮಧುಸೂದನ್ (ಡಿ.ಎಂ.ಐ.ಎಸ್), ಚಿಂತಾಮಣಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಆರ್.ಮಂಜುನಾಥ, ಶಿಡ್ಲಘಟ್ಟ ತಾಲ್ಲೂಕು ತಾಂತ್ರಿಕ ಸಹಾಯಕ ಎಂಜಿನಿಯರ್ ವಿವೇಕ್ ಮತ್ತು ಈ.ತಿಮ್ಮಸಂದ್ರ ಪಿಡಿಒ ತನ್ವೀರ್ ಅಹಮದ್ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version