Sidlaghatta : ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಗೆ ನಾಲ್ಕು ಕುರಿಗಳು ಬಲಿಯಾಗಿದ್ದು, ಹಲವು ಕುರಿಗಳು ಗಂಭೀರವಾಗಿ ಗಾಯಗೊಂಡಿವೆ. ತಡರಾತ್ರಿ ನಡೆದ ಈ ಘಟನೆಯಲ್ಲಿ ಜನಪದ ಕಲಾವಿದ ಈ ಧರೆ ಪ್ರಕಾಶ್ ಅವರಿಗೆ ಸೇರಿದ ಕುರಿ ಶೆಡ್‌ಗೆ ಬೀದಿ ನಾಯಿಗಳ ಗುಂಪು ನುಗ್ಗಿ ದಾಳಿ ನಡೆಸಿತ್ತು.
ಚಿಕಿತ್ಸೆ, ಆರ್ಥಿಕ ನಷ್ಟ
ಗಾಯಗೊಂಡ ಕುರಿಗಳಿಗೆ ಅಬ್ಲೂಡು ಪಶು ಆರೋಗ್ಯ ಕೇಂದ್ರದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಕುರಿಗಳ ಸಾವಿನಿಂದ ಕುಟುಂಬಕ್ಕೆ ಆರ್ಥಿಕ ನಷ್ಟ ಉಂಟಾಗಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರಕಾಶ್ ಒತ್ತಾಯಿಸಿದ್ದಾರೆ.
ಶಾಶ್ವತ ಪರಿಹಾರಕ್ಕೆ ಆಗ್ರಹ
ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಹಾಗೂ ಸಂಬಂಧಪಟ್ಟ ಇಲಾಖೆಗಳು ತುರ್ತು ಕ್ರಮ ಕೈಗೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
In English: A pack of stray dogs attacked a sheep shed belonging to folk artist E. Dhare Prakash in Varadanayakanahalli village, Sidlaghatta taluk, late at night, killing four sheep and seriously injuring several others. Injured sheep were treated by doctors at Abbludu veterinary hospital. Prakash has demanded government compensation for the loss, while villagers are urging the gram panchayat and concerned departments to take urgent, permanent action against the growing stray dog menace.








