Home News ಮಕ್ಕಳು ಶಿಕ್ಷಕರನ್ನು ಅನುಕರಣೆ ಮಾಡುವುದರಿಂದ ಶಿಕ್ಷಕರ ಪ್ರತಿ ನಡೆಯೂ ಮಾದರಿಯಾಗಿರಬೇಕು

ಮಕ್ಕಳು ಶಿಕ್ಷಕರನ್ನು ಅನುಕರಣೆ ಮಾಡುವುದರಿಂದ ಶಿಕ್ಷಕರ ಪ್ರತಿ ನಡೆಯೂ ಮಾದರಿಯಾಗಿರಬೇಕು

0

ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನೆಹರು ಯುವಕೇಂದ್ರ, ಬೆಂಗಳೂರು ಗಾಂಧೀಭವನದ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ರಾಷ್ಟ್ರೀಯ ಯುವಯೋಜನೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ, ಸದೃಢ ಭಾರತಕ್ಕಾಗಿ ಫಿಟ್ ಇಂಡಿಯಾ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿದರು.
ಶಿಕ್ಷಕರು ನಿರಂತವಾಗಿ ಅಧ್ಯಯನಶೀಲರಾಗಿರಬೇಕು. ಮಕ್ಕಳು ಶಿಕ್ಷಕರನ್ನು ಅನುಕರಣೆ ಮಾಡುವುದರಿಂದ ಶಿಕ್ಷಕರ ಪ್ರತಿ ನಡೆಯೂ ಮಾದರಿಯಾಗಿರಬೇಕಾಗುತ್ತದೆ. ಶಿಕ್ಷಕರು ಮತ್ತಷ್ಟು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಮೂಲಕ ಭವಿಷ್ಯ ಭಾರತದ ಅಭಿವೃದ್ಧಿಯನ್ನು ಗುರಿಯನ್ನಾಗಿಸಿಕೊಂಡು ದುಡಿಯಬೇಕಿದೆ ಎಂದು ಅವರು ತಿಳಿಸಿದರು.

 ಶಿಕ್ಷಕರಲ್ಲಿ ತಾಳ್ಮೆ, ಸದೃಢ ಮನಸ್ಸು ಅಗತ್ಯವಾಗಿ ಇರಬೇಕು. ಶಿಕ್ಷಕರ ಜವಾಬ್ದಾರಿಯು ಅತಿ ಪ್ರಮುಖವಾದುದಾಗಿದ್ದು ಉತ್ತಮ ಸಮಾಜದ ಅಭಿವೃದ್ಧಿಗೆ ಶಿಕ್ಷಕ ಪ್ರಯತ್ನಿಸಬೇಕು. ತಾವೂ ಆರೋಗ್ಯವಾಗಿದ್ದು ಮಕ್ಕಳ ಮಾನಸಿಕ, ಶೈಕ್ಷಣಿಕ ಮತ್ತು ದೈಹಿಕ ಸದೃಡತೆಗೆ ಮಾರ್ಗದರ್ಶನ ತೋರಬೇಕು ಎಂದರು.

 ರಾಷ್ಟ್ರೀಯ ಯುವಯೋಜನೆ ರಾಜ್ಯ ಸಂಯೋಜಕ ವಿ.ಪ್ರಶಾಂತ್ ಮಾತನಾಡಿ, ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಆರೋಗ್ಯವಂತ ಮಾನವಸಂಪನ್ಮೂಲದ ಅಗತ್ಯತೆಯಿದ್ದು ಎಲ್ಲರೂ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕಡೆಗೆ ಒತ್ತು ನೀಡಬೇಕು. ನಿರಂತರ ಓಟ, ವಾಕಿಂಗ್, ಬೈಸಿಕಲ್ ತುಳಿಯುವುದು, ಯೋಗಮಾಡುವಂತಹ ಚಟುವಟಿಕೆಗಳನ್ನು ರೂಢಿಸಿಕೊಳ್ಳಬೇಕು ಎಂದರು.

 ನೆಹರು ಯುವಕೇಂದ್ರದ ವತಿಯಿಂದ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷ ಎಂ.ಶಂಕರಪ್ಪ, ಗ್ರಾಮಪಂಚಾಯಿತಿ ಮಾಜಿ ಸದಸ್ಯ ಎನ್.ಅಶ್ವತ್ಥಪ್ಪ, ಶಿವಶಂಕರಪ್ಪ, ದೇವರಾಜು, ಉದ್ಯಮಿ ಸತೀಶ್, ದೊಡ್ಡಮುನಿವೆಂಕಟಶೆಟ್ಟಿ, ಎಂಪಿಸಿಎಸ್ ಅಧ್ಯಕ್ಷ ಮಂಜುನಾಥ್‌ಗೌಡ, ಎ.ನಾಗೇಶ್‌ಗೌಡ, ಬಚ್ಚೇಗೌಡ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

error: Content is protected !!