Home News ಸ್ವಾಮಿ ವಿವೇಕಾನಂದ ಜನ್ಮದಿನೋತ್ಸವ

ಸ್ವಾಮಿ ವಿವೇಕಾನಂದ ಜನ್ಮದಿನೋತ್ಸವ

0
Sidlaghatta Mallur Swami Vivekananda Birth Anniversary Celebration

Mallur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ವಿವೇಕಾನಂದ ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ ಜನ್ಮದಿನೋತ್ಸವ ಹಾಗೂ ಶಾಲಾ-ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಅಧ್ಯಕ್ಷ ರಾಮಾಂಜಿನಪ್ಪ ಅವರು ಮಾತನಾಡಿದರು.

ಮಾನವೀಯ ಮೌಲ್ಯಗಳ ಜೊತೆಗೆ ಸಮಗ್ರ ಏಕತೆಯ ಚಿಂತನಾ ಸಿದ್ಧಾಂತವನ್ನು ವಿಶ್ವಕ್ಕೆ ಬೋಧಿಸಿ ಯುವಜನತೆಗೆ ಸ್ಫೂರ್ತಿಯ ಚಿಲುಮೆಯಾಗಿದ್ದಾರೆ. ಸ್ವಾಮಿ ವಿವೇಕಾನಂದರ ಚಿಂತನೆ, ಆದರ್ಶ ಬದುಕು ಇಡೀ ವಿಶ್ವಕ್ಕೆ ದಾರಿದೀಪವಾಗಿದೆ. ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಶಾಲೆಗೆ ಊರಿಗೆ ದೇಶಕ್ಕೆ ಕೀರ್ತಿ ತರಬೇಕೆಂದು ಅವರು ಹೇಳಿದರು.

ನಮ್ಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಉತ್ತಮ ಫಲಿತಾಂಶ ತಂದಿರುವುದು ಬಹಳ ಹೆಮ್ಮೆ ಹಾಗೂ ಪ್ರಥಮ ದರ್ಜೆಯ ಹಂತದ ವಿದ್ಯಾರ್ಥಿಗಳು ಒಬ್ಬರಿಗಿಂತ ಒಬ್ಬರು ಪೈಪೋಟಿಗೆ ಬಿದ್ದು ಒಳ್ಳೆಯ ಫಲಿತಾಂಶ ತಂದು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹಾಗೂ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ್ದ ಕ್ರೀಡಾ ಕೂಟಗಳಲ್ಲಿ ವಿಜೇತರಾದವರಿಗೆ ಬಹುಮಾನ ಪ್ರಮಾಣಪತ್ರ ನೀಡಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ.ಆರ್.ಶಿವಣ್ಣ, ಖಜಾಂಚಿ ಎಂ.ಕೆ.ಚಂದ್ರಶೇಖರ್, ನಿರ್ದೇಶಕ ಸಿಎಂ ದೇವರಾಜ್, ಎಂ.ಆರ್.ಮಂಜುನಾಥ ಬಾಬು, ಕೆ.ಎಂ.ಮುನಿರೆಡ್ಡಿ, ವೈ.ಎಂ.ರಮೇಶ್, ಪ್ರಾಧ್ಯಾಪಕರಾದ ಸಿ.ಎಂ.ಸುರೇಶ್, ರಾಜೇಂದ್ರ ಕುಮಾರ್, ವೆಂಕಟೇಶ್, ಹೇಮಲತಾ, ಪ್ರಸನ್ನ, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version