Home News ತಲಕಾಯಲಬೆಟ್ಟ ಬ್ರಾಹ್ಮಣ ಸಂಘದ “ಸುವರ್ಣ ಸಂಭ್ರಮ ಸಮ್ಮಿಲನ”

ತಲಕಾಯಲಬೆಟ್ಟ ಬ್ರಾಹ್ಮಣ ಸಂಘದ “ಸುವರ್ಣ ಸಂಭ್ರಮ ಸಮ್ಮಿಲನ”

0
Talakayalabetta Brahmins Association suvarna sammilana

Talakayalabetta, Sidlaghatta : ತಲಕಾಯಲಬೆಟ್ಟ ಬ್ರಾಹ್ಮಣ ಸಂಘವು 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14, ಭಾನುವಾರ ಬೆಳಿಗ್ಗೆ 9 ಗಂಟೆಗೆ ತಲಕಾಯಲಬೆಟ್ಟದಲ್ಲಿ “ಸುವರ್ಣ ಸಂಭ್ರಮ ಸಮ್ಮಿಲನ”ವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಿ.ಆರ್. ಶಂಕರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್. ರಘುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಬಿ.ಎನ್. ರವಿಕುಮಾರ್ ಮತ್ತು ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ತಲಕಾಯಲಬೆಟ್ಟದ ಶ್ರೀ ವೆಂಕಟರಮಣಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಕೀರ್ತಿಶೇಷ ಪಲಿಚೇರ್ಲು ಪಿ.ಎಸ್. ಕೃಷ್ಣಮೂರ್ತಿರಾವ್ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಡಿ.ಆರ್. ಶಂಕರ್ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರೇರಕ ಭಾಷಣಕಾರರಾದ ವೈ.ವಿ. ಗುಂಡೂರಾವ್ ಮತ್ತು ವಂದೇಮಾತರಂ ಪಾಠಶಾಲೆಯ ಸಂಸ್ಥಾಪಕ ಡಾ. ಜಿ.ಬಿ. ಹರೀಶ್ ಅವರು ಪ್ರೇರಣಾ ಭಾಷಣ ಮಾಡುವರು. ಕುಮಾರಿ ನೀಹಾರಿಕಾ ಅವರಿಂದ ಭರತನಾಟ್ಯ ಪ್ರದರ್ಶನ, 101 ಹಿರಿಯ ದಂಪತಿಗಳ ಸನ್ಮಾನ ಹಾಗೂ ಮಹಿಳಾ ಸಂಘದ ಕ್ರೀಡಾಕೂಟ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

ಹೆಚ್ಚಿನ ಸಂಖ್ಯೆಯಲ್ಲಿ ವಿಪ್ರ ಬಂಧುಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಅಧ್ಯಕ್ಷರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಪ್ರತಿನಿಧಿ ಪಲಿಚೇರ್ಲು ಪಿ.ಆರ್. ಪ್ರಕಾಶ್, ದಿಬ್ಬೂರಹಳ್ಳಿ ಶಂಕರ ಸೇವಾ ಸಮಿತಿ ಅಧ್ಯಕ್ಷ ಮೋಕ್ಷಚಗುಂಡಂ ವಿ. ಸೂರ್ಯಕುಮಾರ್, ಗಾಯತ್ರಿ ಮಹಿಳಾ ಮಂಡಳಿ ಅಧ್ಯಕ್ಷೆ ಎಸ್.ವಿ. ವಿಜಯಲಕ್ಷ್ಮಿ ಸೂರ್ಯಕುಮಾರ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version