ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: 213 ಕ್ರೀಡಾಪಟುಗಳ ನೋಂದಣಿ, ವಿಜೇತರಿಗೆ ಪದಕ

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರದ ನೆಹರು ಕ್ರೀಡಾಂಗಣದಲ್ಲಿ 2026–27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಬುಧವಾರ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಆನ್‌ ಲೈನ್ ಮೂಲಕ 213 ಕ್ರೀಡಾಪಟುಗಳು ನೋಂದಾಯಿಸಿಕೊಂಡಿದ್ದರು.

ವಿವಿಧ ಕ್ರೀಡಾ ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಕ್ರೀಡಾಪಟುಗಳು ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ವಿಜೇತರಾಗಿ ಆಯ್ಕೆ ಮಾಡಿ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ವಿತರಿಸಲಾಯಿತು.

ದಸರಾ ಕ್ರೀಡಾಕೂಟದ ಮಹತ್ವವೇನು?

ತಾಲ್ಲೂಕು ದೈಹಿಕ ಶಿಕ್ಷಣ ಪರೀಕ್ಷಕ ಅಮರನಾಥ್.ಸಿ ಮಾತನಾಡಿ, “ದಸರಾ ಕ್ರೀಡಾಕೂಟವು ಹಲವು ವರ್ಷಗಳಿಂದ ನಡೆಯುತ್ತಿದ್ದು, ಕ್ರೀಡಾಪಟುಗಳ ಪ್ರತಿಭೆ ಗುರುತಿಸಲು ಉತ್ತಮ ವೇದಿಕೆಯಾಗಿದೆ. ಕ್ರೀಡೆಯಲ್ಲಿ ಸಾಧನೆ ಮಾಡಲು ನಿರಂತರ ಅಭ್ಯಾಸ, ಶಿಸ್ತು ಮತ್ತು ಪರಿಶ್ರಮ ಅಗತ್ಯ” ಎಂದರು.

“ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಸಾಮರ್ಥ್ಯದ ಜತೆಗೆ ಆತ್ಮವಿಶ್ವಾಸ, ಸಮಯಪ್ರಜ್ಞೆ, ನಾಯಕತ್ವ ಗುಣ ಮತ್ತು ಕ್ರೀಡಾಸ್ಫೂರ್ತಿ ಬೆಳೆಸಿಕೊಳ್ಳಬಹುದು. ತಾಲೂಕು ಮಟ್ಟದ ಸ್ಪರ್ಧೆಗಳ ಮೂಲಕ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಮುಂದಿನ ಹಂತದ ಸ್ಪರ್ಧೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ” ಎಂದು ಹೇಳಿದರು.

ಕ್ಷೇತ್ರ ಸಮನ್ವಯ ಅಧಿಕಾರಿ ಪ್ರಸನ್ನ ಕುಮಾರ್, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ ಬಾಬು ಕೆ.ಎಂ., ರಾಷ್ಟ್ರೀಯ ಕ್ರೀಡಾಪಟು ಜಯಂತಿ ಗ್ರಾಮ ನಾರಾಯಣಸ್ವಾಮಿ, ದೈಹಿಕ ಶಿಕ್ಷಕರಾದ ಚಂದ್ರಕಲಾ, ಅನ್ನಪೂರ್ಣ, ಮಂಜುಳಾ, ಸಂತೋಷ್, ವೆಂಕಟಸ್ವಾಮಿ, ನರಸಿಂಹಮೂರ್ತಿ, ಕೃಷ್ಣಪ್ಪ, ಶ್ರೀನಾಥ್, ನೇತ್ರ, ಆಶಾ, ದ್ಯಾವಪ್ಪ, ವೆಂಕಟೇಶ್, ರಾಜಣ್ಣ ಇದ್ದರು.

ಹಿಂದಿನ ವರ್ಷಗಳ ಕ್ರೀಡಾಕೂಟದ ಕುರಿತು ಶಿಡ್ಲಘಟ್ಟದ ನೆಹರು ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ಹಾಗೂ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ವರದಿಗಳನ್ನು, ತಾಲ್ಲೂಕಿನ ವಿದ್ಯಾರ್ಥಿಗಳ ಇತ್ತೀಚಿನ ಸಾಧನೆಯ ಕುರಿತು ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ: ಜಿಲ್ಲಾ ಮಟ್ಟಕ್ಕೆ ವಿದ್ಯಾರ್ಥಿಗಳ ಆಯ್ಕೆ ವರದಿಯನ್ನೂ ಓದಿ.

In English: The taluk-level Dasara sports meet for 2026–27 was held at Nehru Stadium in Sidlaghatta town on Wednesday, with 213 athletes registered online. It was organised jointly by the district administration, the Zilla Panchayat, the Department of Youth Empowerment and Sports, the Department of School Education and the taluk Physical Education Teachers’ Association. Winners in various events received certificates and medals. Taluk Physical Education Inspector Amarnath C said the Dasara sports meet, held for many years, is a good platform to identify talent, and that talented athletes from taluk-level events are given opportunities to compete at the next level.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Silk

Related news

- Advertisement -