Home News ಸಾಮೂಹಿಕ ನಾಯಕತ್ವದಲ್ಲಿ ರೈತ ಸಂಘಗಳ ಪ್ರತಿಭಟನೆ

ಸಾಮೂಹಿಕ ನಾಯಕತ್ವದಲ್ಲಿ ರೈತ ಸಂಘಗಳ ಪ್ರತಿಭಟನೆ

0
Farmers Protest Sidlaghatta Taluk Office

ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಬುಧವಾರ ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳನ್ನುದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾದ್ಯಕ್ಷ ಮುನಿಕೆಂಪಣ್ಣ ಮಾತನಾಡಿದರು.

ರೈತರನ್ನು ಒಂದೆಡೆ ದೇಶದ ಬೆನ್ನೆಲುಬು ಎಂದು ಕರೆಯುವ ಸರ್ಕಾರಗಳೇ ರೈತರ ಬೆನ್ನುಮೂಳೆ ಮುರಿಯುವ ಕೆಲಸ ಮಾಡುತ್ತಿದೆ ಎಂದು ಸಾಮೂಹಿಕ ನಾಯಕತ್ವದಲ್ಲಿ ಅವರು ಆರೋಪಿಸಿದರು.

 ರೈತರನ್ನು ಅನ್ನದಾತ ಹೇಳುವ ಸರ್ಕಾರಗಳು ಈವರೆಗೂ ರೈತಾಪಿ ವರ್ಗಕ್ಕೆ ಕೊಟ್ಟ ಕೊಡುಗೆ ಶೂನ್ಯ, ಬದಲಾಗಿ ರೈತರ ಬೆನ್ನೆಲುಬು ಮುರಿಯಲು ಕೆಲ ಅವೈಜ್ಞಾನಿಕ ಕಾಯಿದೆಗಳನ್ನು ಜಾರಿಗೆ ತಂದಿದ್ದು ರೈತ ವಿರೋಧಿ ಕಾಯಿದೆಗಳನ್ನು ರದ್ದು ಪಡಿಸುವಂತೆ ಒತ್ತಾಯಿಸಿ ಕಳೆದ ಎಂಟು ತಿಂಗಳಿಂದ ರೈತರು ಪ್ರತಿಭಟಿಸುತ್ತಿದ್ದರೂ ಸಹ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದರು. ರೈತ ವಿರೋಧಿ ನೀತಿಗಳನ್ನು ಜಾರಿಗೊಳಿಸುವುದರಿಂದ ಕೃಷಿ ಹಾಗು ಕೃಷಿಯನ್ನು ನಂಬಿರುವ ರೈತರ ಸಂತತಿಯನ್ನು ನಾಶಮಾಡಲು ಸರ್ಕಾರಗಳು ಮುಂದಾಗಿವೆ ಎಂದರು.

 ಕೂಡಲೇ ರೈತ ವಿರೋಧಿ ಕಾಯಿದೆಗಳನ್ನು ರದ್ದು ಪಡಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಆಂದೋಲನ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿ ರಾಷ್ಟ್ರಪತಿಗಳಿಗೆ ತಹಶೀಲ್ದಾರ್ ಬಿ.ಎಸ್.ರಾಜೀವ್ ಮೂಲಕ ಮನವಿ ಪತ್ರ ಸಲ್ಲಿಸಿದರು.

 ಜಿಲ್ಲಾ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ರೈತ ಮುಖಂಡರಾದ ವೆಂಕಟರೆಡ್ಡಿ, ಭೀಮಣ್ಣ, ಭರತ್, ಶ್ರೀನಿವಾಸ್, ರಮೇಶ್ ಕುಮಾರ್, ಈರಪ್ಪ, ಮುನಿರಾಜು ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version