ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬಾಲ್ಯವಿವಾಹಗಳನ್ನು ತಡೆಯುವ ತಾಲ್ಲೂಕು ಮಟ್ಟದ ಸಮನ್ವಯ ಮತ್ತು ಪರಿಶಿಲನಾ ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಮಾತನಾಡಿದರು.
ಸಾರ್ವಜನಿಕ ಆರೋಗ್ಯದ ದೊಡ್ಡ ಬೆದರಿಕೆಗಳಲ್ಲಿ ತಂಬಾಕು ಸೇವನೆಯು ಒಂದಾಗಿದೆ. ಇದು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಕೊಲ್ಲುತ್ತಿದೆ. ಪ್ರತ್ಯಕ್ಷ ಧೂಮಪಾನ ಮಾಡುವುದರಿಂದ ಸುಮಾರು ದಶಲಕ್ಷಗಳಷ್ಟು ಜನರು ಸಾವಿಗೀಡಾದರೆ ಧೂಮಪಾನ ಮಾಡದವರು ಪರೋಕ್ಷ ಧೂಮಪಾನಕ್ಕೆ ಬಲಿಯಾಗಿ ಲಕ್ಷಾಂತರ ಜನರು ಸಾವಿಗೀಡಾಗುತ್ತಿದ್ದಾರೆ ಎಂದು ಅವರು ತಿಳಿಸಿದರು.
ಭಾರತ ಸರಕಾರ 11ನೇ ಪಂಚವಾರ್ಷಿಕ ಯೋಜನೆಯ ಅವಧಿಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಪ್ರಾರಂಬಿಸಿತು. ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಉದ್ದೇಶಗಳು, ತಂಬಾಕು ಸೇವನೆಯ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು. ತಂಬಾಕು ಉತ್ಪನ್ನಗಳ ಸೇವನೆ, ಉತ್ಪಾದನೆ ಮತ್ತು ಪೂರೈಕೆಯನ್ನು ಕಡಿಮೆ ಮಾಡುವುದು. ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ(ಕೋಟ್ಪಾ)2003 ರನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವುದು. ತಂಬಾಕು ಬಳಕೆಯನ್ನು ತ್ಯಜಿಸಲು ಸೇವೆಯನ್ನು ಒದಗಿಸುವುದು. ತಂಬಾಕು ನಿಯಂತ್ರಣ ಮತ್ತು ತಡೆಗಟ್ಟುವಿಕೆಗಾಗಿ ವಿಶ್ವ ಆಯೋಗ್ಯ ಸಂಸ್ಥೆಯ ಎಫ್.ಸಿ.ಟಿ.ಸಿಯ ಕಾರ್ಯತಂತ್ರಗಳನ್ನು ಅನುಷ್ಠಾನ ಮಾಡುವುದು ಆಗಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ತಂಬಾಕು ತ್ಯಜಿಸುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಅವರು ವಿವರಿಸಿದರು.
ನಂತರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬಾಲ್ಯವಿವಾಹಗಳನ್ನು ತಡೆಯುವ ತಾಲ್ಲೂಕು ಮಟ್ಟದ ಸಮನ್ವಯ ಮತ್ತು ಪರಿಶಿಲನಾ ಸಭೆಯಲ್ಲಿ ಮಕ್ಕಳಾ ರಕ್ಷಣಾ ಅಧಿಕಾರಿ ರಾಮೇಗೌಡ ಮಾತನಾಡಿ, ಒಂದು ವರ್ಷದ ಅವಧಿಯಲ್ಲಿ ಬಾಲ್ಯ ವಿವಾಹ ನಿಷೇದ ಕಾಯ್ದೆಯಡಿ ತಡೆಗಟ್ಟಿದ ಹಾಗೂ ಬಾಲ್ಯವಿವಾಹ ನಡೆದ ಪ್ರಕರಣಗಳ ಕುರಿತಾಗಿ, ಬಾಲ್ಯ ವಿವಾಹ ನಿಷೇದ ಕಾಯ್ದೆಯಡಿ ಹಮ್ಮಿಕೊಂಡ ಕಾರ್ಯಕ್ರಮಗಳ ವಿವರಗಳು, ಗ್ರಾಮ ಮಟ್ಟದ ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿಗಳನ್ನು ಬಲವರ್ಧನೆ ಮಾಡುವ ಬಗ್ಗೆ, ಶಾಲಾ ಶಿಕ್ಷಕರ ಜವಾಬ್ದಾರಿಗಳ ಕುರಿತಾಗಿ ವಿವರವಾಗಿ ತಿಳಿಸಿದರು.
ತಹಶೀಲ್ದಾರ್ ರಾಜೀವ್, ತಾಲ್ಲೂಕು ಪಂಚಾಯಿತಿ ಇಒ ಚಂದ್ರಕಾಂತ್, ಸಿಡಿಪಿಒ ನಾಗವೇಣಿ, ಮಹಿಳಾ ಸಾಂತ್ವನ ಕೇಂದ್ರದ ಅಧ್ಯಕ್ಷೆ ವಿಜಯ ವೆಂಕಟರಾಮ್, ಜಿಲ್ಲಾ ಸಾಮಾಜ ಕಾರ್ಯಕರ್ತ ಮಂಜುನಾಥ್ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi