Home News ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದ EO

ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದ EO

0

ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಹಸಿ ಮತ್ತು ಒಣ ತ್ಯಾಜ್ಯ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸಲು ಅಂಗಡಿ ಮುಗ್ಗಟ್ಟುಗಳ ಮಾಲೀಕರಿಗೆ ಅರಿವು ಮೂಡಿಸಿರುವ ಹಿನ್ನಲೆ ಸ್ವತಃ ಪೊರಕೆ ಹಿಡಿದು ಕಸ ಗೂಡಿಸುವ ಅಭಿಯಾನಕ್ಕೆ ಚಾಲನೆ ನೀಡಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಬಿ.ಶಿವಕುಮಾರ್ ಮಾತನಾಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಸ್ವಚ್ಛ ಮತ್ತು ಹಸಿರು ಪರಿಸರವನ್ನು ಉಂಟು ಮಾಡಲು ಜಿಲ್ಲಾ ಪಂಚಾಯಿತಿ ಸಿಇಓ ಫೌಜಿಯಾ ತರುನಮ್ ಅವರು ಧೃಢ ಸಂಕಲ್ಪ ಮಾಡಿದ್ದು, ಅವರ ನಿರ್ದೇಶನದಂತೆ ಸ್ವಚ್ಛತೆಯ ಬಗ್ಗೆ ಜನಜಾಗೃತಿ ಮತ್ತು ಅರಿವು ಮೂಡಿಸಲು ಮುಂದಾಗಿದ್ದೇವೆ ಎಂದು ಅವರು ತಿಳಿಸಿದರು.

ತಾಲ್ಲೂಕಿನಲ್ಲಿ ನಗರ ಪ್ರದೇಶದ ಮಾದರಿಯಲ್ಲಿ ಗ್ರಾಮಾಂತರ ಪ್ರದೇಶಗಳಲ್ಲೂ ಸಹ ಕಸ ವಿಲೇವಾರಿ ಘಟಕಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದ್ದು, ಪಂಚಾಯಿತಿ ಕೇಂದ್ರಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಿ ಗ್ರಾಮ ನೈರ್ಮಲ್ಯ ಕಾಪಾಡಲು ಆದ್ಯತೆ ನೀಡಲಾಗಿದೆ ಎಂದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಸರ ಸಂರಕ್ಷಣೆ ಸ್ವಚ್ಛತೆ ಕಾಪಾಡಲು ಜಿಲ್ಲಾ ಪಂಚಾಯಿತಿ ಹಾಗೂ ಸರ್ಕಾರದೊಂದಿದೆ ನಾಗರಿಕರು ಸಹಕಾರ ನೀಡಬೇಕು. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಯಿಂದ ಅಭಿಯಾನ ನಡೆಸಲಾಗುವುದು ಎಂದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಳೆ ನೀರು ಸಂರಕ್ಷಣೆ ಮಾಡಲು ಬಹು ಕಮಾನ್ ಚೆಕ್ ಡ್ಯಾಂ ಗಳು ದನ ಕರುಗಳಿಗಾಗಿ ಗೋ ಕುಂಟೆಗಳು ಕೆರೆ ಕಲ್ಯಾಣಿಗಳನ್ನು ಅಭಿವೃದ್ಧಿ ಮಾಡಲಾಗುವುದು. ಅದೇ ರೀತಿಯಲ್ಲಿ ಸ್ವಚ್ಚ ಭಾರತ್ ಅಭಿಯಾನ ಯೋಜನೆಯಡಿ ಕಸ ವಿಲೇವಾರಿ ಘಟಕಗಳನ್ನು ನಿರ್ಮಿಸಿ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಪ್ರಥಮ ಆದ್ಯತೆ ನೀಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಜರಿದ್ದರು.

error: Content is protected !!