ಶಿಕ್ಷಕರ ಸಹಕಾರದಿಂದ ಶೈಕ್ಷಣಿಕ ಪ್ರಗತಿ ಸಾಧ್ಯ: ಶಾಸಕ ರವಿಕುಮಾರ್

- Advertisement -
- Advertisement -

Sidlaghatta : ಶಿಡ್ಲಘಟ್ಟ ತಾಲ್ಲೂಕನ್ನು ಜಿಲ್ಲೆಯಲ್ಲಿಯೇ ಶೈಕ್ಷಣಿಕವಾಗಿ ಮೊದಲ ಸ್ಥಾನಕ್ಕೇರಿಸುವ ಗುರಿಯನ್ನು ಸಾಕಾರಗೊಳಿಸಲು ಸರ್ಕಾರಿ ಶಾಲಾ ಶಿಕ್ಷಕರು ಪ್ರಾಮಾಣಿಕವಾಗಿ ಸಹಕರಿಸಬೇಕು ಎಂದು ಶಾಸಕ ಬಿ.ಎನ್. ರವಿಕುಮಾರ್ ಹೇಳಿದರು. ಮೇಲೂರಿನ ತಮ್ಮ ಗೃಹ ಕಚೇರಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಶಿಡ್ಲಘಟ್ಟ ತಾಲ್ಲೂಕನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಅಮೂಲ್ಯವಾಗಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರಲ್ಲಿ ಜ್ಞಾನ, ಮೌಲ್ಯಗಳು ಹಾಗೂ ಉತ್ತಮ ವ್ಯಕ್ತಿತ್ವವನ್ನು ಬೆಳೆಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಅವರು ಹೇಳಿದರು.

ಶಿಕ್ಷಕರಲ್ಲಿ ಗುಂಪುಗಾರಿಕೆಗೆ ಅವಕಾಶ ಇರಬಾರದು. ಪರಸ್ಪರ ಸಹಕಾರ, ಸಮನ್ವಯ ಹಾಗೂ ಕರ್ತವ್ಯನಿಷ್ಠೆಯಿಂದ ಕಾರ್ಯನಿರ್ವಹಿಸಿದರೆ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಶಾಸಕ ರವಿಕುಮಾರ್ ಸನ್ಮಾನಿಸಿದರು.

ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ, ಕಾರ್ಯದರ್ಶಿ ಕೆಂಪೇಗೌಡ, ಗೌರವಾಧ್ಯಕ್ಷ ಅಕ್ಕಲ ರೆಡ್ಡಿ, ಉಪಾಧ್ಯಕ್ಷರಾದ ಮೇಲೂರು ಮಂಜುನಾಥ್, ನರಸಿಂಹ ರೆಡ್ಡಿ, ನಿಕಟ ಪೂರ್ವ ಅಧ್ಯಕ್ಷರಾದ ಸಿ.ಎಂ. ಮುನಿರಾಜು ಬಿ, ಆರ್, ನಾರಾಯಣಸ್ವಾಮಿ, ಸರಸ್ವತಮ್ಮ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುಂದರ ಚಾರಿ, ಕಾರ್ಯದರ್ಶಿ ನಾಗರಾಜ್, ಖಜಾಂಚಿ ಬಾಲಚಂದ್ರ, ಉಪಾಧ್ಯಕ್ಷ ಸುದರ್ಶನ್, ಲಕ್ಷ್ಮಿಕಾಂತಮ್ಮ, ಸಹ ಕಾರ್ಯದರ್ಶಿ ಪದ್ಮಾವತಮ್ಮ, ಸದಸ್ಯರಾದ ಪಿಳ್ಳಣ್ಣ, ಸುಮಾ, ಸುರೇಶ್, ಶಿಕ್ಷಕರಾದ ಅಹಲ್ಯ, ತಿರುಮಲೇಶ್, ವೇಣುಗೋಪಾಲ್, ಅನ್ಸರ್ ಪಾಷಾ, ಸಿ.ಆರ್.ಪಿ ಮಂಜುನಾಥ್, ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಗಜೇಂದ್ರ, ಕಾರ್ಯದರ್ಶಿ ನರಸಿಂಹರಾಜು ಹಾಜರಿದ್ದರು.

In English: MLA B.N. Ravikumar felicitated Government School Teachers Association office bearers at his Meluru home office, saying sincere teacher cooperation is essential to making educationally and economically backward Sidlaghatta taluk the district’s top performer in education. He urged teachers to avoid factionalism and work with mutual cooperation and dedication. State Employees Association secretary K.N. Subbareddy and several teachers’ association office bearers attended.

ಶಾಸಕ ರವಿಕುಮಾರ್ ಅವರ ಇತರ ಕಾರ್ಯಕ್ರಮಗಳ ಕುರಿತು ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ವರದಿಗಳನ್ನು ವೀಕ್ಷಿಸಿ.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!