21.2 C
Sidlaghatta
Friday, July 18, 2025

ಶಿಕ್ಷಕರ ಪ್ರಾಮಾಣಿಕ ಪ್ರಯತ್ನವೇ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನಕ್ಕೆ ಬರಲು ಕಾರಣವಾಗಿದೆ

- Advertisement -
- Advertisement -

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹನುಮಂತಪುರ ಗೇಟ್ ಬಳಿಯಿರುವ ಬಿ.ಜಿ.ಎಸ್ ವಿದ್ಯಾಸಂಸ್ಥೆಯಲ್ಲಿ ಶನಿವಾರ ನಡೆದ ಭಾರತರತ್ನ ಡಾ.ಎಸ್.ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಜಿ.ನಾಗೇಶ್ ಮಾತನಾಡಿದರು.
ಕೋವಿಡ್ 19 ರ ಸಂಕಷ್ಟದ ಕಾಲದಲ್ಲಿಯೂ ತಮ್ಮ ಪ್ರಾಣ ಮುಡಿಪಾಗಿಟ್ಟು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶ್ರಮಿಸಿದ ಎಲ್ಲಾ ಶಿಕ್ಷಕ ವರ್ಗದ ಪ್ರಾಮಾಣಿಕ ಪ್ರಯತ್ನವೇ ಕಳೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನಕ್ಕೆ ಬರಲು ಕಾರಣವಾಗಿದೆ. ಇನ್ನು ಕೋವಿಡ್ ಸಂಕಷ್ಟದ ಕಾಲದಲ್ಲಿ ಮಕ್ಕಳ ಭವಿಷ್ಯ ರೂಪಿಸಲು ನಮ್ಮ ನಡೆ ನಿಮ್ಮ ಕಡೆಗೆ ಎಂಬ ದ್ಯೇಯ ವಾಖ್ಯದೊಂದಿಗೆ ಮಕ್ಕಳ ಬಳಿಗೆ ಶಿಕ್ಷಕರು ತೆರಳಿ ಪಾಠ ಹೇಳಿಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಬಂಕ್ ಮುನಿಯಪ್ಪ ಮಾತನಾಡಿ ಮಕ್ಕಳ ವ್ಯಕ್ತಿತ್ವವನ್ನು ರೂಪಿಸುತ್ತಾ ಮುಂದಿನ ಪೀಳಿಗೆಯನ್ನು ತಿದ್ದಿ ತೀಡಿ ಸಮಾಜದ ಪ್ರಗತಿಗೆ ಕಾರಣರಾಗುವ ಶಿಕ್ಷಕರಿಗೆ ಹೃದಯ ವೈಶಾಲ್ಯತೆ ಇರಬೇಕು. ಸಮಾಜದಲ್ಲಿ ಪ್ರಜ್ಞಾವಂತ ನಾಗರೀಕರಿದ್ದಾಗ ಮಾತ್ರ ಅಂತಹ ಸಮಾಜ ಆರೋಗ್ಯವಂತವಾಗಿ ಬೆಳೆಯಲು ಸಾಧ್ಯವಾಗುತ್ತದೆ. ಹಾಗಾಗಿ ಮಕ್ಕಳಿಗೆ ಸಿಗಬೇಕಾದಂತಹ ಮಾನವೀಯ ಮೌಲ್ಯಗಳುಳ್ಳ ಶಿಕ್ಷಣವನ್ನು ನೀಡಲು ಪ್ರತಿಯೊಬ್ಬ ಶಿಕ್ಷಕರು ಮುಂದಾಗಬೇಕು, ಮಕ್ಕಳ ಭವಿಷ್ಯವನ್ನು ರೂಪಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಹಿರೇಬಲ್ಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮನೋರ್‌ಮಣಿ.ಬಿ, ಮುತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ದಾವೂದ್‌ಪಾಷ.ಎಸ್ ಮತ್ತು ತುಮ್ಮನಹಳ್ಳಿ ಸರ್ಕಾರಿ ಪ್ರೌಡಶಾಲೆಯ ಶಿಕ್ಷಕಿ ಮಾಲತಿ.ಎಸ್, ಸೇರಿದಂತೆ 22 ಮಂದಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ತಾ.ಪಂ ಅಧ್ಯಕ್ಷ ಎಂ.ಕೆ.ರಾಜಶೇಖರ್, ತಾ.ಪಂ ಇಓ ಬಿ.ಶಿವಕುಮಾರ್ ತಹಸೀಲ್ದಾರ್ ಕೆ.ಅರುಂಧತಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಮುನಿರಾಜು, ಮತ್ತಿತರರು ಹಾಜರಿದ್ದರು.
 

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!