12 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ: ಐದು ದಿನಗಳಲ್ಲಿ ಈ-ಸ್ವತ್ತು ವಿತರಣೆ

- Advertisement -
- Advertisement -

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡು ಹಲವು ವರ್ಷಗಳಿಂದ ವಾಸಿಸುತ್ತಿರುವ ಸುಮಾರು 12 ಸಾವಿರ ಕುಟುಂಬಗಳಿಗೆ ಶಾಶ್ವತ ಮಾಲೀಕತ್ವ ಕಲ್ಪಿಸುವ ಉದ್ದೇಶದಿಂದ ಕಂದಾಯ ಗ್ರಾಮದ ವಿಶೇಷ ಅಭಿಯಾನ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭು ಮಂಗಳವಾರ ತಿಳಿಸಿದರು. ಮುಂದಿನ ಐದು ದಿನಗಳಲ್ಲಿ ಸುಮಾರು 12 ಸಾವಿರ ಮಂದಿಗೆ ಹಕ್ಕುಪತ್ರ ನೋಂದಣಿ ಹಾಗೂ ಈ-ಸ್ವತ್ತು ವಿತರಣೆ ಕಾರ್ಯ ಕೈಗೊಳ್ಳಲಾಗುವುದು ಎಂದು ಅವರು ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಳಿಸಿದರು.

ಹಕ್ಕುಪತ್ರ ಅಭಿಯಾನ ಹೇಗೆ ನಡೆಯಲಿದೆ?

ಜಿಲ್ಲಾದ್ಯಂತ ಸುಮಾರು 1.10 ಲಕ್ಷ ಜನರಿಗೆ ಹಕ್ಕುಪತ್ರ ನೀಡುವ ಗುರಿ ಹೊಂದಲಾಗಿದೆ ಎಂದ ಜಿಲ್ಲಾಧಿಕಾರಿ, ಅಭಿಯಾನದ ಅಂಗವಾಗಿ ಸರ್ವೆಯರ್‌ಗಳು, ಗ್ರಾಮ ಆಡಳಿತಾಧಿಕಾರಿಗಳು, ತಹಶೀಲ್ದಾರ್‌ಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದೇ ವೇದಿಕೆಯಲ್ಲಿ ತರಬೇತಿ ನೀಡಲಾಗುತ್ತಿದೆ ಎಂದರು. 10ಕ್ಕೂ ಹೆಚ್ಚು ಮನೆಗಳಿರುವ ವಸತಿ ಪ್ರದೇಶಗಳನ್ನು ಉಪಗ್ರಾಮವೆಂದು ಗುರುತಿಸಿ, ಮನೆ ಹಾಗೂ ಮನೆ ನಿರ್ಮಿಸಿರುವ ಜಾಗಕ್ಕೂ ಮಾಲೀಕತ್ವ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

ಪೌತಿ ಖಾತೆ ಮತ್ತು ದಾಖಲೆ ಡಿಜಿಟಲೀಕರಣ

ಎರಡು ತಲೆಮಾರುಗಳಿಂದ ಬಾಕಿ ಉಳಿದಿರುವ ಆಸ್ತಿಗಳನ್ನು ಮುಂದಿನ ತಲೆಮಾರಿನ ವಾರಸುದಾರರ ಹೆಸರಿಗೆ ವರ್ಗಾಯಿಸಲು ಪೌತಿ ಖಾತೆ ಅಭಿಯಾನ ಕೈಗೊಳ್ಳಲಾಗಿದ್ದು, ಈಗಾಗಲೇ ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಪೌತಿ ಖಾತೆಗಳನ್ನು ಮಾಡಲಾಗಿದೆ. ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮುಂದಿನ ಎರಡು-ಮೂರು ತಿಂಗಳಲ್ಲಿ ಅಭಿಯಾನ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ದರಕಾಸ್ತು-ಪೋಡಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಸರ್ವೆ ನಡೆಸಿ, ದಾಖಲೆಗಳ ನೈಜತೆ ಪರಿಶೀಲಿಸಿ ಆನ್‌ಲೈನ್‌ನಲ್ಲಿ ಅಳವಡಿಸುವ ಕಾರ್ಯ ಶೇ.70ರಷ್ಟು ಪೂರ್ಣಗೊಂಡಿದೆ. ಇನ್ನೂ ಒಂದೂವರೆ ತಿಂಗಳಲ್ಲಿ ಸಂಪೂರ್ಣ ಕಾರ್ಯ ಮುಗಿಸುವಂತೆ ಗ್ರಾಮ ಆಡಳಿತಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭು ತಿಳಿಸಿದರು.

ಬೆಳೆ ವಿಮೆ, ಕುಡಿಯುವ ನೀರಿಗೆ ಆದ್ಯತೆ

ಮಳೆ ಕೊರತೆಯಿಂದ ಬಿತ್ತನೆ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ನೆರವು ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಸುಮಾರು 1.50 ಲಕ್ಷ ರೈತರು ಬೆಳೆ ವಿಮೆ ಮಾಡಿಸಿಕೊಂಡಿದ್ದು, ಅವರ ವಂತಿಕೆ ಸುಮಾರು ₹4.50 ಕೋಟಿ ಇದೆ. ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವು ನೀಡಲು ಸುಮಾರು ₹28 ಕೋಟಿ ಪರಿಹಾರ ಒದಗಿಸುವ ಯೋಜನೆ ರೂಪಿಸಲಾಗಿದ್ದು, ಜಿಲ್ಲೆಗೆ ಸುಮಾರು ₹76 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭು ತಿಳಿಸಿದರು.

ಮಳೆ ಕೊರತೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 14 ಕಡೆ ಖಾಸಗಿ ಕೊಳವೆಬಾವಿಗಳಿಂದ ನೀರು ಪಡೆದು ಸಾರ್ವಜನಿಕರಿಗೆ ಪೂರೈಸಲಾಗುತ್ತಿದೆ. ಬರ ಪರಿಸ್ಥಿತಿಯಲ್ಲಿ ಹೊಸ ಕೊಳವೆಬಾವಿ ಕೊರೆದರೂ ನೀರು ಸಿಗುವ ಸಾಧ್ಯತೆ ಕಡಿಮೆ ಇರುವುದರಿಂದ ಸದ್ಯಕ್ಕೆ ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಮಳೆ ಬಂದ ಬಳಿಕ ಅಗತ್ಯವಿರುವ ಕಡೆಗಳಲ್ಲಿ ಹೊಸ ಕೊಳವೆಬಾವಿ ಕೊರೆಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಗಗನ ಸಿಂಧು, ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ ಇದ್ದರು.

In English: District Collector Prabhu announced a special revenue-village campaign to grant permanent ownership titles to about 12,000 families who have lived for years in unauthorized houses across Sidlaghatta taluk, part of a district-wide target of 1.10 lakh title deeds. He also detailed a “Pauti Khate” inheritance-transfer drive (over 1 lakh done district-wide), 70%-complete digitization of Darkast-Podi land records, and drought-response measures: ₹4.5 crore in crop insurance premiums covering 1.5 lakh farmers, a proposed ₹76 crore relief package, and drinking water being supplied from 14 private borewells due to rainfall shortage.

FAQ

ಪ್ರ: ಹಕ್ಕುಪತ್ರ ಅಭಿಯಾನದ ಪ್ರಯೋಜನ ಪಡೆಯುವುದು ಹೇಗೆ?
ಉ: ಅನಧಿಕೃತವಾಗಿ ಮನೆ ನಿರ್ಮಿಸಿ ವಾಸಿಸುತ್ತಿರುವವರು ಗ್ರಾಮ ಆಡಳಿತಾಧಿಕಾರಿ ಅಥವಾ ತಹಶೀಲ್ದಾರ್ ಕಚೇರಿಯನ್ನು ಸಂಪರ್ಕಿಸಿ ಸರ್ವೆ ಮೂಲಕ ಹಕ್ಕುಪತ್ರ ನೋಂದಣಿ ಮತ್ತು ಈ-ಸ್ವತ್ತು ಪಡೆಯಬಹುದು.

ಪ್ರ: ಬೆಳೆ ನಷ್ಟ ಪರಿಹಾರ ಯಾವಾಗ ಸಿಗಲಿದೆ?
ಉ: ಜಿಲ್ಲೆಗೆ ₹76 ಕೋಟಿ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುದಾನ ಬಿಡುಗಡೆಯಾದ ನಂತರ ಬೆಳೆ ವಿಮೆ ಮಾಡಿಸಿದ ರೈತರಿಗೆ ಪರಿಹಾರ ವಿತರಿಸಲಾಗುವುದು.

ಕಂದಾಯ ಇಲಾಖೆಯ ಇತರ ಅಭಿಯಾನಗಳ ಬಗ್ಗೆ ಜಾತಿ ಪ್ರಮಾಣ ಪತ್ರ ಮನೆಮನೆ ವಿತರಣೆ ಕುರಿತ ವರದಿಯನ್ನೂ ನೋಡಿ.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!