28.8 C
Sidlaghatta
Thursday, June 13, 2024

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ: ಕೇಂದ್ರ ಸಚಿವ ಫಗ್ಗನ್ ಸಿಂಗ್ ಕುಲಾಸ್ತೆ

- Advertisement -
- Advertisement -

Sidlaghatta : ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಸಹಿತ ಸರ್ವಜನರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿ ಜಾರಿ ಮಾಡಿದ್ದು ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಉಕ್ಕು ಮತ್ತು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಫಗ್ಗನ್ ಸಿಂಗ್ ಕುಲಾಸ್ತೆ ವಿಶ್ವಾಸ ವ್ಯಕ್ತಪಡಿಸಿದರು.

ಶಿಡ್ಲಘಟ್ಟ ನಗರದ ಮಯೂರ ವೃತ್ತದಲ್ಲಿನ ಬಿಜೆಪಿ ಸೇವಾ ಸೌಧ ಕಚೇರಿಗೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಬ್ ಕಾ ಸಾಥ್ ಸಬ್ಕಾ ವಿಕಾಸ್ ಸಬ್ಕಾ ವಿಶ್ವಾಸ್ ಸಬ್ಕಾ ಪ್ರಯಾಸ್ ಎಂಬ ಘೋಷಣೆಯೊಂದಿಗೆ ಎಲ್ಲರ ಕಲ್ಯಾಣಕ್ಕಾಗಿ ಶ್ರಮಿಸಿ ವಿಶ್ವದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಅವರು ಅಧಿಕಾರಕ್ಕೆ ಬರುವುದಕ್ಕೂ ಮುಂದೆ ಘೋಷಣೆ ಮಾಡಿ ಭರವಸೆ ನೀಡಿದ ಎಲ್ಲ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಠಾನ ಮಾಡುವ ಮೂಲಕ ನುಡಿದಂತೆ ನಡೆದ ಪ್ರಧಾನಿ ಎಂಬ ಕೀರ್ತಿಗೂ ಪಾತ್ರರಾಗಿದ್ದಾರೆ ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ಮೀಸಲಾತಿ ಸೌಲಭ್ಯವನ್ನು ಹೆಚ್ಚಿಸಿದ ಸರ್ಕಾರ ದೇಶದಲ್ಲಿ ಯಾವುದಾದರೂ ಇದ್ದರೆ ಅದು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಮಾತ್ರ ಎಂದು ಬಣ್ಣಿಸಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ನಿಗಮಗಳನ್ನು ಸ್ಥಾಪಿಸಿ ಅದಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡಿದೆ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಯೋಜನೆಗಳು, ದೇಶದ ಅಭಿವೃದ್ದಿಯ ವೇಗ, ಕಾರ್ಯಕ್ರಮಗಳನ್ನು ನೋಡಿ ಬಿಜೆಪಿಯನ್ನು ಬೆಂಬಲಿಸಿ, ಮತ್ತೊಮ್ಮೆ ಅಧಿಕಾರಕ್ಕೆ ಬರುವಂತೆ ಮಾಡಿ ಎಂದು ಮನವಿ ಮಾಡಿದರು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸೀಕಲ್ ರಾಮಚಂದ್ರಗೌಡ ಅವರ ಸೇರ್ಪಡೆಯಿಂದ ಪಕ್ಷ ಇಲ್ಲಿ ಇನ್ನಷ್ಟು ಬಲಿಷ್ಠವಾಗುತ್ತಿದೆ. ಇಲ್ಲಿ ರಾಜಕೀಯ ಬದಲಾವಣೆಯ ಎಲ್ಲ ಲಕ್ಷಣಗಳು ಕಾಣುತ್ತಿವೆ ಎಂದ ಅವರು, ಎಲ್ಲ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಿದರೆ ಕಮಲ ಇಲ್ಲಿ ಅರಳುವುದು ನಿಶ್ಚಿತ ಎಂದರು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಸೀಕಲ್ ರಾಮಚಂದ್ರಗೌಡ ಅವರೊಂದಿಗೆ ಇಲ್ಲಿನ ಪಕ್ಷದ ಸಂಘಟನೆ, ಬೆಳವಣಿಗೆ ಹಾಗೂ ಸ್ಥಿತಿಗತಿಗಳ ಬಗ್ಗೆ ಕೆಲ ಕಾಲ ಚರ್ಚಿಸಿ ಪಕ್ಷದ ಇನ್ನಷ್ಟು ಸಂಘಟನೆಗೆ ಸಲಹೆ ಸೂಚನೆಗಳನ್ನು ನೀಡಿದರು.

ಬಿಜೆಪಿ ಮುಖಂಡ ರಾಮಚಂದ್ರಗೌಡ, ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರ ಗೌಡ, ನಗರ ಮಂಡಲ ಅಧ್ಯಕ್ಷ ರಾಘವೇಂದ್ರ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ನರ್ಮದಾ ರೆಡ್ಡಿ, ಚಿಂತಾಮಣಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಹಾಜರಿದ್ದರು.


Union Minister expresses confidence in BJP government’s welfare plans for all

Sidlaghatta : Union Minister of State for Steel and Rural Development, Faggan Singh Kulaste, expressed confidence in the government led by Prime Minister Narendra Modi’s welfare plans for all, including Scheduled Castes, Scheduled Tribes, Backward Classes, and Minorities. He affirmed that the BJP government would regain power in the state.

During a visit to the BJP Seva Sudha office in Sidlaghatta, Mayura Circle, Singh Kulaste stated that Prime Minister Modi’s slogan ‘Sab Ka Saath Sabka Vikas Sabka Vishwas Sabka Prayas’ has earned him worldwide appreciation for working towards the welfare of all. He praised Modi for fully implementing all the plans he promised before coming to power, earning him the credit of being the Prime Minister.

Singh Kulaste highlighted that the BJP government in Karnataka has increased reservation facilities for the welfare of Scheduled Castes and Scheduled Tribes, a feat that no other government has achieved in the country. He urged the public to support the pro-people schemes, the country’s development speed, and the programs of the central and state governments, and vote for the BJP to come back to power.

With the addition of Seikal Ramachandra Gowda in the Sidlaghatta assembly constituency, Singh Kulaste believes that the party is growing stronger in the region. He said that if all the workers work together, the lotus, the BJP symbol, will bloom in the area.

During the meeting, Singh Kulaste discussed the organization, growth, and party conditions with Seikal Ramachandra Gowda and offered suggestions for further strengthening the party.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!