Home News ಶಾಸಕ ವಿ.ಮುನಿಯಪ್ಪ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಕೆಡಿಪಿ ಸಭೆ

ಶಾಸಕ ವಿ.ಮುನಿಯಪ್ಪ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಕೆಡಿಪಿ ಸಭೆ

0
Sidlaghatta MLA V Muniyappa KDP Meeting

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.

ಈಗಾಗಲೇ 1.2 ಲಕ್ಷ ಕ್ಕಿಂತ ಹೆಚ್ಚು ಆದಾಯ ಹೊಂದಿರುವವರ ಪಡಿತರ ಚೀಟಿ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಮಾರ್ಚ್ ಅಂತ್ಯದೊಳಗೆ ಅಂತಹವರು ಸ್ವಯಂ ಪ್ರೇರಿತರಾಗಿ ಪಡಿತರ ಚೀಟಿ ವಾಪಸ್ಸು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಪಡಿತರ ಅಕ್ಕಿಯ ದುರುಪಯೋಗದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಪಡಿತರ ವಿತರಕರಿಂದ ಅಕ್ಕಿಯ ದುರ್ಬಳಕೆ ಹಾಗೂ ಕಳ್ಳತನದಂತಹ ಪ್ರಕರಣಗಳು ಕಂಡು ಬಂದಲ್ಲಿ ಪಡಿತರ ವಿತರಕರು ಸೇರಿದಂತೆ ಆಹಾರ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದರು.

 ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ನೀಡಲಾಗುವ ಪಡಿತರ ಅಕ್ಕಿಯ ದುರುಪಯೋಗದ ಕುರಿತು ಆರೋಪಗಳು ಕೇಳಿ ಬರುತ್ತಿದ್ದು, ಪಡಿತರ ವಿತರಿಸುವ ಅಂಗಡಿಗಳಲ್ಲಿ, ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಪಡಿತರ ಅಕ್ಕಿ ದುರ್ಬಳಕೆಯನ್ನು ತಡೆಯಬೇಕು ಎಂದರು.

 ನಗರದ ಹೊರವಲಯದ ಹೆದ್ದಾರಿಗಳಲ್ಲಿ ವಿದ್ಯುತ್ ದೀಪಗಳು ಕೆಟ್ಟು ತಿಂಗಳುಗಳು ಕಳೆದರೂ ದುರಸ್ತಿ ಪಡಿಸಿಲ್ಲ ಕೂಡಲೇ ದುರಸ್ತಿಗೊಳಿಸುವಂತೆ ನಗರಸಭೆ ಸೇರಿದಂತೆ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

 ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣದವರೆಗೂ ರಸ್ತೆಯ ಒಂದು ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡುವುದು ಸೇರಿದಂತೆ ಫುಟ್ ಪಾತ್ ಮೇಲೆ ಸಾಮಗ್ರಿಗಳನ್ನು ಇಟ್ಟು ವ್ಯಾಪಾರ ಮಾಡುವುವವರನ್ನು ತೆರವುಗೊಳಿಸಿ ಎಂದರು.

 ಎಲ್ಲಾ ಇಲಾಖೆಗಳಿಂದ ಸರ್ಕಾರದ ಯೋಜನೆಗಳು ಅಥವಾ ಕಾಮಗಾರಿಗಳನ್ನು ಜಾರಿಗೊಳಿಸುವ ಮುನ್ನ ನಮ್ಮ ಗಮನಕ್ಕೆ ತರುವ ಜೊತೆಗೆ ಸಕಾಲದಲ್ಲಿ ಅನುದಾನ ಬಳಸಿಕೊಂಡು ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್, ಇಓ ಚಂದ್ರಕಾಂತ್, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version