21.2 C
Sidlaghatta
Friday, July 18, 2025

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ವಿತರಣೆ

- Advertisement -
- Advertisement -

ಮಾಜಿ ಪ್ರಧಾನಿ ದಿ.ರಾಜೀವ್‍ಗಾಂಧಿ ಹಾಗೂ ದೇವರಾಜ್ ಅರಸ್ ಅವರ ಜನ್ಮದಿನದ ಸ್ಮರಣಾರ್ಥ ನಗರದ ವಿವಿಧ ಪ್ರದೇಶಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆನ್‍ಲೈನ್ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಲು ಮೊಬೈಲ್‍ಗಳನ್ನು ವಿತರಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ, ಹೈನುಗಾರಿಕೆ ಮತ್ತು ತರಕಾರಿ ಉತ್ಪಾದನೆಯಲ್ಲಿ ಖ್ಯಾತಿ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಸಹ ಸಾಧನೆ ಮಾಡುತ್ತಿರುವುದು ಸಂತಸದಾಯಕ ವಿಷಯ ಎಂದು ಅವರು ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆ ಬರಪೀಡಿತ ಪ್ರದೇಶವಾದರೂ ಸಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊರತೆಯಿಲ್ಲ ಎಂಬುದು ಸಾಬೀತಾಗಿದೆ. ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ಶಿಕ್ಷಕರು, ಖಾಸಗಿ ಶಾಲಾ ಆಡಳಿತ ಮಂಡಳಿತದ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳ ಪ್ರೋತ್ಸಾಹ ಮತ್ತು ಪೋಷಕರ ಮಾರ್ಗದರ್ಶನದಿಂದ ವಿದ್ಯಾರ್ಥಿಗಳ ಶ್ರಮದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆ ಅತ್ಯುತ್ತಮ ಸಾಧನೆ ಮಾಡಿದೆ ಅದಕ್ಕಾಗಿ ಎಲ್ಲರನ್ನು ಅಭಿನಂದಿಸುತ್ತೇನೆ ಎಂದರು.

 ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡು ಸತತ ಪರಿಶ್ರಮದಿಂದ ಗುರಿ ಸಾಧಿಸಲು ಯಾವುದೇ ಅಡತಡೆಗಳು ಎದುರಾಗುವುದಿಲ್ಲ. ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆದು ಐಎಎಸ್, ಐಪಿಎಸ್, ಕೆಎಎಸ್ ಸಹಿತ ಉನ್ನತ ಸ್ಥಾನಗಳನ್ನು ಅಲಂಕರಿಸಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಹಾಜಿರಾ, ಅಂಕಿತ, ಬಿಎಸ್‍ಸಿ ವಿದ್ಯಾರ್ಥಿನಿ ಲಾವಣ್ಯ ಅವರಿಗೆ ಮೊಬೈಲ್‍ಗಳನ್ನು ಅವರ ಮನೆಗಳಿಗೆ ತೆರಳಿ ಶಾಸಕರು ವಿತರಿಸಿ ಶುಭ ಹಾರೈಸಿದರು.

 ಕೋಚಿಮುಲ್ ನಿರ್ದೇಶಕ ಆರ್.ಶ್ರೀನಿವಾಸ್, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಯಾಸ್ಮೀನ್ ತಾಜ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್, ಮಹಮದ್ ಹಫೀಜ್, ನವಾಜ್, ನಗರಸಭಾ ಸದಸ್ಯ ಕೃಷ್ಣಮೂರ್ತಿ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
https://www.facebook.com/sidlaghatta

Instagram 📷
https://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
https://www.sidlaghatta.com

📱 Join WhatsApp
https://wa.me/917406303366?text=Hi

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!