Home News ಕ್ಷೇತ್ರವನ್ನು ಕೊಳಗೇರಿ ಮುಕ್ತ ಮಾಡಲು ಪ್ರಯತ್ನ – ಶಾಸಕ ವಿ.ಮುನಿಯಪ್ಪ

ಕ್ಷೇತ್ರವನ್ನು ಕೊಳಗೇರಿ ಮುಕ್ತ ಮಾಡಲು ಪ್ರಯತ್ನ – ಶಾಸಕ ವಿ.ಮುನಿಯಪ್ಪ

0

ನಗರದ 26ನೇ ವಾರ್ಡ್‌ನ ಆಶ್ರಯ ಬಡಾವಣೆಯಲ್ಲಿ ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 15 ಲಕ್ಷ ರೂಗಳ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿರುವ ಕೊಳಗೇರಿ ಪ್ರದೇಶಗಳಲ್ಲಿ ಗುಣಮಟ್ಟದ ರಸ್ತೆ, ಚರಂಡಿ, ಕುಡಿಯುವ ನೀರು ಸಹಿತ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಕ್ಷೇತ್ರವನ್ನು ಕೊಳಗೇರಿ ಮುಕ್ತ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ಹೇಳಿದರು.

ಕ್ಷೇತ್ರದಲ್ಲಿರುವ ಕೊಳಗೇರಿ ಪ್ರದೇಶವನ್ನು ಗುರುತಿಸಿ ಅಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಪ್ರಥಮ ಆದ್ಯತೆ ನೀಡಲಾಗಿದೆ. ನಗರ ಪ್ರದೇಶದಲ್ಲಿ ವಸತಿಹೀನರಿಗಾಗಿ ಸುಮಾರು 2 ಸಾವಿರ ನಿವೇಶನಗಳನ್ನು ಉಚಿತವಾಗಿ ಹಂಚಿಕೆ ಮಾಡಿದ್ದೇವೆ ಎಂದರು.

ಆಶ್ರಯ ಬಡಾವಣೆಯ ಸಮೀಪದಲ್ಲಿ ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 140 ಮನೆಗಳನ್ನು ನಿರ್ಮಿಸಿ ಬಡ ಕೂಲಿ ಕಾರ್ಮಿಕರಿಗೆ ಹಂಚಿಕೆ ಮಾಡಿದ್ದೇವೆ. ಸರ್ಕಾರದಿಂದ ನಗರೋತ್ಥಾನ ಯೋಜನೆಯಡಿ ವಿವಿಧ ಹಂತಗಳಲ್ಲಿ ಬಂದಿರುವ ಅನುದಾನವನ್ನು ಎಲ್ಲಿ ಬಳಕೆ ಮಾಡಿದ್ದಾರೆ ಯಾವ ಕಾಮಗಾರಿಗಳನ್ನು ನಡೆಸಿದ್ದಾರೆ ಎಂಬ ಮಾಹಿತಿ ಇಲ್ಲ. ಕೆರೆಗೆ ಹೊಂದಿಕೊಂಡಿರುವಂತೆ ನಿರ್ಮಿಸಿರುವ ಪೂಲ್ ಪಾಂಡ್ ಕಾಮಗಾರಿಯಲ್ಲಿ ಅವ್ಯವಹಾರ ಆಗಿದೆ ಎಂದು ನಾಗರಿಕರು ದೂರಿದ್ದು ಈ ಕುರಿತು ತನಿಖೆ ನಡೆಸಬೇಕಿದೆ ಎಂದರು.

ರಾಜ್‌ಕುಮಾರ್, ಸಿದ್ದೀಖ್, ಬೈರರೆಡ್ಡಿ ವಾರ್ಡ್‌ನ ನಾಗರಿಕರು ಹಾಜರಿದ್ದರು.

error: Content is protected !!