News

ವಾಲಿಬಾಲ್‌ನಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ, ರಾಜ್ಯಮಟ್ಟಕ್ಕೆ ವಿದ್ಯಾರ್ಥಿನಿಯರ ತಂಡ ಆಯ್ಕೆ

Sidlaghatta Vasavi girls volleyball team district winners selected for state level

Sidlaghatta : ಕೈವಾರದಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್‌ ಪಂದ್ಯಾವಳಿಯಲ್ಲಿ ಶಿಡ್ಲಘಟ್ಟದ ವಾಸವಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.

ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ವಾಸವಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರು ಎದುರಾಳಿ ತಂಡವನ್ನು ಮಣಿಸಿ ಪ್ರಥಮ ಸ್ಥಾನ ಪಡೆದುಕೊಂಡರು. ಈ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದು, ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿಯರ ಸಾಧನೆಗೆ ಶಾಲೆಯ ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದು, ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ವಿಜಯ ಸಾಧಿಸುವಂತೆ ಶುಭ ಹಾರೈಸಿದ್ದಾರೆ.

ವಾಸವಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ರೂಪಸಿ ರಮೇಶ್ ಅವರು ವಿದ್ಯಾರ್ಥಿನಿಯರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ಹಂತದಲ್ಲಿಯೂ ಯಶಸ್ಸು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ