ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯಡಿ ವಾತ್ಸಲ್ಯ ಕಿಟ್ ವಿತರಣೆ

SriKshetra Dharmasthala Kshemabhivruddi Trust A M Tyagaraj

ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಹಾಗೂ ಕಂಬದಹಳ್ಳಿ ಗ್ರಾಮಗಳಲ್ಲಿ ಬಡವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಕಿಟ್ ವಿತರಿಸಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಎ.ಎಂ.ತ್ಯಾಗರಾಜ್ ಮಾತನಾಡಿದರು.

ಬಡಕುಟುಂಬಗಳನ್ನು ಬಡತನದಿಂದ ಮುಕ್ತಗೊಳಿಸುವುದೇ ಮಾನವೀಯ ಧರ್ಮ. ಕಠಿಣ ಆರೋಗ್ಯ ಸಮಸ್ಯೆಗೆ ಒಳಪಟ್ಟವರ, ಒಂಟಿಯಾಗಿರುವವರ, ವಯೋವೃದ್ಧರ, ಅಂಗವಿಕಲರ ಸಹಾಯಕ್ಕೆ ನಿಲ್ಲುವ ಕಾರ್ಯಕ್ರಮವೇ ವಾತ್ಸಲ್ಯ ಯೋಜನೆ ಎಂದು ಅವರು ತಿಳಿಸಿದರು.

ಹಿರಿಯರು ಮಾತಿನಲ್ಲಿ ಶಾಪ ಕೊಡಬೇಕಾಗಿಲ್ಲ. ಮನದಲ್ಲಿ ನೊಂದು ಕಣ್ಣೀರು ಹಾಕಿದರೂ, ಅವರ ಕಣ್ಣೀರೇ ಶಾಪವಾಗಿ ಪರಿಣಮಿಸುತ್ತದೆ. ಆಧುನಿಕ ಸಮಾಜದಲ್ಲಿ ನಿರ್ಗತಿಕರನ್ನು, ರೋಗಿಗಳನ್ನು, ವೃದ್ಧರನ್ನು ಕಡೆಗಣಿಸುವುದು ಸಾಮಾನ್ಯವಾಗಿದೆ. ಇಳಿ ವಯಸ್ಸಿನಲ್ಲಿ ಅವರಿಗೆ ಅಭಯ ನೀಡಿ ಪ್ರೀತಿ-ವಿಶ್ವಾಸದಿಂದ ಆರೈಕೆ ಮಾಡಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಪ್ರೇರಣೆ ನೀಡುವುದೇ “ವಾತ್ಸಲ್ಯ” ಯೋಜನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿ, ಶಿಡ್ಲಘಟ್ಟ ತಾಲ್ಲೂಕಿನಲ್ಲಿ 151 ಮಂದಿಗೆ ಮಾಸಾಶನ ನೀಡಲಾಗುತ್ತಿದೆ. ಅವರಲ್ಲಿ ಕಡುಬಡವರಾದ 75 ಮಂದಿಗೆ ಅವರಿಗೆ ಅತ್ಯಗತ್ಯ ವಸ್ತುಗಳನ್ನು ನೀಡಲಾಗುತ್ತಿದೆ ಎಂದರು.

ಮೇಲ್ವಿಚಾರಕಿ ಜ್ಯೋತಿ, ಒಕ್ಕೂಟದ ಪದಾಧಿಕಾರಿ ಗೀತಾ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!