Sidlaghatta : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಶ್ರೀ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 17ರಂದು ನಗರದ ತಾಲ್ಲೂಕು ಕಚೇರಿಯಲ್ಲಿ ಶ್ರೀ ವಿಶ್ವಕರ್ಮ ಜಯಂತ್ಯುತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ.
In English: Sidlaghatta taluk office will host the Vishwakarma Jayanti celebration and a talent-award ceremony on September 17, honoring Vishwakarma community students who scored high marks in the 2025-26 SSLC and 2nd PUC exams; eligible students must register by September 10 with mark sheets, Aadhaar card, and a passport-size photo.
ಈ ಸಂದರ್ಭದಲ್ಲಿ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ವಾಸವಾಗಿರುವ ವಿಶ್ವಕರ್ಮ ಸಮುದಾಯದ 2025–26ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.
ಅರ್ಹ ವಿದ್ಯಾರ್ಥಿಗಳು 2025–26ನೇ ಸಾಲಿನ ಅಂಕಪಟ್ಟಿ, ಆಧಾರ್ ಕಾರ್ಡ್ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಸೆಪ್ಟೆಂಬರ್ 10ರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸುಂದರಾಚಾರಿ (9731270250), ಅಮರನಾರಾಯಣಚಾರಿ (9379976591) ಹಾಗೂ ಶ್ರೀನಾಥ್ (9538111910) ಅವರನ್ನು ಸಂಪರ್ಕಿಸಬಹುದು.

