Home News ಸ್ವಯಂಪ್ರೇರಿತ ರಕ್ತದಾನ ಶಿಬಿರ: 34 ಯೂನಿಟ್ ರಕ್ತ ಸಂಗ್ರಹ

ಸ್ವಯಂಪ್ರೇರಿತ ರಕ್ತದಾನ ಶಿಬಿರ: 34 ಯೂನಿಟ್ ರಕ್ತ ಸಂಗ್ರಹ

0
Sidlaghatta voluntary blood donation camp 34 units collected

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕೆ. ಮುತ್ತುಕದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಇಲಾಖೆ, ರೆಡ್‌ ಕ್ರಾಸ್ ಸಂಸ್ಥೆ ಹಾಗೂ ತಾಲ್ಲೂಕು ICTC ವಿಭಾಗದ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

CHIMUL ಮಾಜಿ ಅಧ್ಯಕ್ಷ ಬಿ.ಆರ್. ಶ್ರೀನಿವಾಸ್ ಅವರು ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಕ್ತದಾನವು ಅಮೂಲ್ಯ ಜೀವಗಳನ್ನು ಉಳಿಸುವ ಮಹತ್ವದ ಸೇವೆಯಾಗಿದ್ದು, ಆರೋಗ್ಯವಂತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂಬ ಸಂದೇಶ ನೀಡಿದರು.

ಶಿಬಿರದಲ್ಲಿ ಒಟ್ಟು 34 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರು, ITI ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡು ರಕ್ತದಾನ ಶಿಬಿರಕ್ಕೆ ಸಹಕಾರ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನರ್ಮದಾ, ಚಂದ್ರು, ದೇವರಾಜ್, ನಾರಾಯಣಸ್ವಾಮಿ, ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ತಾಲ್ಲೂಕು ಹಿರಿಯ ಸಾರ್ವಜನಿಕ ಆರೋಗ್ಯ ಕೇಂದ್ರದ ಅಧಿಕಾರಿ ವಿಜಯ, ICTC ಆಪ್ತ ಸಮಾಲೋಚಕ ಗಂಗಾಧರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರವಿಶಂಕರ್, ರಮೇಶ್, ಆರೋಗ್ಯ ನಿರೀಕ್ಷಣಾಧಿಕಾರಿ ನಂದಿನಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ದೀಪಾ, ಭವಾನಿ, ಶ್ರೀನಾಥ್, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ITI ಕಾಲೇಜಿನ ಪ್ರಾಂಶುಪಾಲರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

In English: A voluntary blood donation camp was held at the K. Muttakadahalli Primary Health Centre in Sidlaghatta taluk, organised by the Health Department, Red Cross and the taluk ICTC unit. Former CHIMUL president B.R. Srinivas inaugurated it, and 34 units of blood were collected with participation from health staff, villagers, ITI college students and the public.

For Daily Updates WhatsApp ‘HI’ to 7406303366

error: Content is protected !!
Exit mobile version