Home News BJP ಕಾರ್ಯಕರ್ತರಿಂದ ಪ್ರತಿಭಟನಾ ಮೆರವಣಿಗೆ

BJP ಕಾರ್ಯಕರ್ತರಿಂದ ಪ್ರತಿಭಟನಾ ಮೆರವಣಿಗೆ

0
West Bengal Medical Intern Case BJP Protest

Sidlaghatta : ಪಶ್ಚಿಮ ಬಂಗಾಳದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಖಂಡಿಸಿ ಶನಿವಾರ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿಡ್ಲಘಟ್ಟ ಬಿಜೆಪಿ ಮಂಡಲ ಅಧ್ಯಕ್ಷ ಸೀಕಲ್ ಆನಂದ ಗೌಡ, ವಿದ್ಯಾರ್ಥಿನಿ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಹಿರಿಯ ವೈದ್ಯ ಡಾ.ಸತ್ಯನಾರಾಯಣರಾವ್ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ಯುವ ವೈದ್ಯೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಇಡೀ ವೈದ್ಯ ಸಮೂಹಕ್ಕೆ ಮಾಡಿರುವ ಘೋರ ಅಪರಾಧವಾಗಿದೆ. ಕಾನೂನಿನ ವೈಫಲ್ಯವನ್ನು ಇದು ಎತ್ತಿ ಹಿಡಿಯುತ್ತದೆ. ಅಲ್ಲದೇ ಈ ಪ್ರಕರಣವು ವೈದ್ಯರುಗಳ ಮನೋಸ್ಥೈರ್ಯ ಕುಗ್ಗಿಸುತ್ತದೆ ಎಂದು ಹೇಳಿದರು.

ಬಿಜೆಪಿ ಮುಖಂಡರಾದ ಸುರೇಂದ್ರಗೌಡ, ಕನಕಪ್ರಸಾದ್, ನರೇಶ್, ಶ್ರೀರಾಮ್ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version