ವಿಶ್ವ ಮಾನವ ಕಳ್ಳಸಾಗಾಣಿಕೆ ತಡೆ ದಿನ: ಶಾಲಾ ಮಕ್ಕಳಿಗೆ ಕಾನೂನು ಅರಿವು ಕಾರ್ಯಕ್ರಮ

- Advertisement -
- Advertisement -

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಗುರುವಾರ ವಿಶ್ವ ಮಾನವ ಕಳ್ಳಸಾಗಾಣಿಕೆ ತಡೆ ದಿನ ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ನಡೆಯಿತು.

ಮಾನವ ಕಳ್ಳಸಾಗಾಣಿಕೆ ಕುರಿತು ಏನು ತಿಳಿಸಲಾಯಿತು?

ಕಾರ್ಯಕ್ರಮದಲ್ಲಿ ಜೆ.ಎಂ.ಎಫ್‌.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಮಾತನಾಡಿ, ಮಾನವ ಕಳ್ಳಸಾಗಾಣಿಕೆಯ ಸ್ವರೂಪ, ಅದರ ದುಷ್ಪರಿಣಾಮಗಳು ಹಾಗೂ ಅದರಿಂದ ಮಕ್ಕಳನ್ನು ರಕ್ಷಿಸಿಕೊಳ್ಳುವ ವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ಸರಳವಾಗಿ ತಿಳಿಸಿದರು. ಅಪರಿಚಿತರೊಂದಿಗೆ ಸಂಪರ್ಕ ಬೆಳೆಸುವಾಗ ಎಚ್ಚರಿಕೆ ವಹಿಸಬೇಕು. ಸಾಮಾಜಿಕ ಜಾಲತಾಣ ಹಾಗೂ ಮೊಬೈಲ್‌ ಗಳನ್ನು ಅತಿಯಾಗಿ ಬಳಸುವುದರಿಂದ ಉಂಟಾಗುವ ಅಪಾಯಗಳ ಬಗ್ಗೆ ಜಾಗೃತರಾಗಿರಬೇಕು ಎಂದು ಸಲಹೆ ನೀಡಿದರು.

ಅಪ್ರಾಪ್ತ ವಯಸ್ಸಿನವರು ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅದು ಜೀವಕ್ಕೆ ಅಪಾಯ ಉಂಟುಮಾಡುವ ಜೊತೆಗೆ ಕಾನೂನು ಕ್ರಮಕ್ಕೂ ಕಾರಣವಾಗುತ್ತದೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಪೌಷ್ಟಿಕ ಆಹಾರ ಮತ್ತು ಕಾನೂನು ಹಕ್ಕುಗಳ ಬಗ್ಗೆ ಏನು ಹೇಳಲಾಯಿತು?

ಪ್ರಧಾನ ಸಿವಿಲ್ ನ್ಯಾಯಾಧೀಶೆ ಸಿ.ಎಸ್. ಸುಕನ್ಯಾ ಮಾತನಾಡಿ, ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಪೌಷ್ಟಿಕಾಂಶಯುಕ್ತ ಆಹಾರ ಅತ್ಯಗತ್ಯವಾಗಿದೆ. ಸಮತೋಲನ ಆಹಾರ ಸೇವನೆಯಿಂದ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಉತ್ತಮವಾಗುವುದರ ಜೊತೆಗೆ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಆರೋಗ್ಯದ ಬಗ್ಗೆ ಜಾಗೃತಿ ಬೆಳೆಸಿಕೊಂಡು ಉತ್ತಮ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸರ್ಕಾರಿ ಸಹಾಯಕ ಅಭಿಯೋಜಕ ಮೊಹಮ್ಮದ್ ಖಾಜಾ ಕಾನೂನು ಅರಿವು ಹಾಗೂ ಮಕ್ಕಳ ಹಕ್ಕುಗಳ ಕುರಿತು ಮಾಹಿತಿ ನೀಡಿದರು. ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ಮತ್ತು ಕಾರ್ಯದರ್ಶಿ ಸಿ.ಜಿ. ಭಾಸ್ಕರ್ ಮಾತನಾಡಿ, ವಿದ್ಯಾರ್ಥಿಗಳು ಕಾನೂನು ಅರಿವು ಬೆಳೆಸಿಕೊಳ್ಳುವುದರ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ವಕೀಲ ಎಚ್. ಎಂ. ರಾಮಕೃಷ್ಣ, ಶಾಲೆಯ ಮುಖ್ಯ ಶಿಕ್ಷಕ ಎಸ್. ಶ್ರೀನಾಥ್, ಶಿಕ್ಷಕಿಯರಾದ ಜಿ. ಶಾಮಲ, ಲಕ್ಷ್ಮಿದೇವಮ್ಮ, ಎಸ್.ಡಿ.ಎಂ.ಸಿ ಅಧ್ಯಕ್ಷ ಗಂಗಾಧರ್, ಸದಸ್ಯ ಈ ಧರೆ ಪ್ರಕಾಶ್ ಹಾಜರಿದ್ದರು.

In English: A legal awareness and outreach programme was held at the Government Higher Primary School, Varadanayakanahalli, in Sidlaghatta taluk on World Day Against Trafficking in Persons, organised by the Taluk Legal Services Committee. JMFC Court Senior Civil Judge Mohammed Roshan Shah spoke to students about human trafficking, its harms, and how to stay safe, including caution with strangers and risks from excessive social media and mobile phone use. Principal Civil Judge C.S. Sukanya spoke on the importance of nutritious food for children’s physical and mental development. Officials also cautioned that minors driving vehicles is illegal and unsafe.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!