Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿ ಹಾಗೂ ಕುಂಭಿಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಡಾ. ನವೀನ್ ಭಟ್.ವೈ. ಮಂಗಳವಾರ ಪರಿಶೀಲಿಸಿದರು.
ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಭೇಟಿ ನೀಡಿದ ಅವರು, ಕಾಲುವೆ ಅಭಿವೃದ್ಧಿ ಕಾಮಗಾರಿ, ಶುದ್ಧ ಕುಡಿಯುವ ನೀರಿನ ಘಟಕ, ಪೈಪ್ ಲೈನ್ ವ್ಯವಸ್ಥೆ, ಜಲ ಜೀವನ್ ಮಿಷನ್ (JJM) ಕಾಮಗಾರಿ ಹಾಗೂ ಕುಡಿಯುವ ನೀರಿನ ಟ್ಯಾಂಕ್ ಗಳ ಸ್ವಚ್ಛತೆ ಸೇರಿದಂತೆ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.
ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯ ಗುಣಮಟ್ಟ, ಪ್ರಗತಿಯ ಹಂತ, ಸಾರ್ವಜನಿಕರಿಗೆ ಆಗುತ್ತಿರುವ ಪ್ರಯೋಜನ ಹಾಗೂ ನಿರ್ವಹಣೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕುಡಿಯುವ ನೀರಿನ ಯೋಜನೆಗಳಡಿ ನಿರ್ಮಿಸಲಾಗಿರುವ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕುಂಭಿಗಾನಹಳ್ಳಿಯಲ್ಲಿ ಏನು ಪರಿಶೀಲಿಸಿದರು?
ನಂತರ ಕುಂಭಿಗಾನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ CEO, ಸಂಜೀವಿನಿ ಭವನ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮಾದರಿ ಅಂಗನವಾಡಿ ಕೇಂದ್ರ ಸೇರಿದಂತೆ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದರು. ಸಾರ್ವಜನಿಕರಿಗೆ ಕಲ್ಪಿಸಲಾಗುತ್ತಿರುವ ಮೂಲಸೌಕರ್ಯಗಳು ಸಮರ್ಪಕವಾಗಿ ಬಳಕೆಯಾಗುವಂತೆ ಹಾಗೂ ಸರ್ಕಾರದ ಯೋಜನೆಗಳ ಉದ್ದೇಶ ಜನರಿಗೆ ತಲುಪುವಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಧಿಕಾರಿಗಳಿಗೆ ಏನು ಸೂಚನೆ ನೀಡಿದರು?
ಗ್ರಾಮೀಣ ಪ್ರದೇಶಗಳಲ್ಲಿ ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ಧಿ ಯೋಜನೆಗಳು ನಿಗದಿತ ಗುಣಮಟ್ಟದಲ್ಲಿ ಪೂರ್ಣಗೊಂಡು, ಸಾರ್ವಜನಿಕರಿಗೆ ದೀರ್ಘಕಾಲಿಕವಾಗಿ ಉಪಯೋಗವಾಗುವಂತಿರಬೇಕು. ಕಾಮಗಾರಿಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ನಿಗಾ ವಹಿಸಬೇಕು ಎಂದು ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ EO ಹೇಮಾವತಿ.ಆರ್., VB-G RAM G ಸಹಾಯಕ ನಿರ್ದೇಶಕ ಚಂದ್ರಪ್ಪ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪುರುಷೋತ್ತಮ್, CDPO ವಿದ್ಯಾ ವಸ್ತದ್, ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂಜನ್ ಕುಮಾರ್, ಕುಂಭಿಗಾನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಕುಮಾರ್, ಎಂಜಿನಿಯರ್ ಗಳಾದ ಗೌತಮ್ ರಾಜ್, ಕಾವ್ಯ, ಮೇಘನಾ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಇಲಾಖೆಯ ಸಿಬ್ಬಂದಿ, ಹಾರ್ಟ್ ಆಫ್ ಲಿವಿಂಗ್ ಹಾಗೂ VB-G RAM G ಸಿಬ್ಬಂದಿ ಇದ್ದರು.
ಜಿ.ಪಂ CEO ಅವರ ಹಿಂದಿನ ಭೇಟಿ ಕುರಿತು ಮತದಾನ ಕೇವಲ ಹಕ್ಕಲ್ಲ, ಜವಾಬ್ದಾರಿಯೂ ಹೌದು: ಜಿ.ಪಂ ಸಿಇಒ ವರದಿಯನ್ನು, ತಾಲ್ಲೂಕಿನ ಮಾದರಿ ಅಂಗನವಾಡಿ ಕುರಿತು ಗೋಡೆಗಳೇ ಕಲಿಕೆಯ ಮಾಧ್ಯಮ: ₹35 ಲಕ್ಷ ವೆಚ್ಚದಲ್ಲಿ ವಿಶೇಷ ವಿನ್ಯಾಸದ ಅಂಗನವಾಡಿ ಕೇಂದ್ರ ವರದಿಯನ್ನೂ ಓದಿ.
In English: Zilla Panchayat Chief Executive Officer (CEO) Dr. Naveen Bhat Y. inspected development works in the Bhaktarahalli and Kumbhiganahalli gram panchayats of Sidlaghatta taluk on Tuesday. In Bhaktarahalli he reviewed canal development, a drinking water purification unit, pipelines, Jal Jeevan Mission (JJM) works and cleaning of drinking water tanks, and directed officials to maintain drinking water infrastructure properly. In Kumbhiganahalli he inspected the Sanjeevini Bhavan, the primary health centre and a model anganwadi centre. He said rural development works must be completed to standard and be useful for the long term, and asked department officials and gram panchayat staff to ensure there are no lapses. Taluk Panchayat EO (Executive Officer) Hemavathi R., CDPO (Child Development Project Officer) Vidya Vastrad and VB-G RAM G (rural employment scheme) assistant director Chandrappa were present.








